ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಎಸ್‌ ಐಟಿ

Most read

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಈ ಹಿಂದೆಯೇ ರಾಜ್ಯಪಾಲರ ಬಳಿ ಅನುಮತಿ ಕೇಳಲಾಗಿತ್ತು. ದೋಷಾರೋಪ ಪಟ್ಟಿಯನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡಿ ಕಳುಹಿಸಲು ರಾಜ್ಯಪಾಲರು ಸೂಚಿಸಿದ್ದರು. ಅದರಂತೆ ದೋಷಾರೋಪ ಪಟ್ಟಿಯನ್ನು ಸಂಪೂರ್ಣವಾಗಿ ತರ್ಜುಮೆ ಮಾಡಿ ರಾಜಭವನಕ್ಕೆ ಕಳುಹಿಸಲಾಗಿದೆ.  

ಸುಮಾರು 4,500 ಪುಟಗಳ ದೋಷಾರೋಪ ಪಟ್ಟಿಯನ್ನು ತರ್ಜುಮೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ರಾಜಭವನಕ್ಕೆ ತಲುಪಿಸಿ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.

More articles

Latest article