ದೆಹಲಿ: 27 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Most read

ನವದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 27 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಥೈಲ್ಯಾಂಡ್‌ನ ಇಬ್ಬರನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಮಾಹಿತಿ ನೀಡಿರುವ ಕಸ್ಟಮ್ಸ್ ಇಲಾಖೆ ನಾಲ್ಕು ಬ್ಯಾಗ್‌ಗಳಲ್ಲಿ ಬಚ್ಚಿಟ್ಟಿದ್ದ ರೂ. 27.08 ಕೆ.ಜಿ ತೂಕದ ಗಾಂಜಾ ಮತ್ತು ಮಾದಕ ದ್ರವ್ಯಗಳ 54 ಪ್ಯಾಕೆಟ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ನಡವಳಿಕೆ ಮೇಲೆ ಅನುಮಾನ ವ್ಯಕ್ತವಾದ ಹಿನ್ನೆಲೆ ಅಧಿಕಾರಿಗಳು ಬ್ಯಾಗ್‌ ಅನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ ಸುಮಾರು 27 .09 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ‍ಪತ್ತೆ ಹಚ್ಚಿ ಜಪ್ತಿ ಮಾಡಲಾಗಿದೆ ಎಂದು ಇಲಾಖೆ ಪೋಸ್ಟ್‌ನಲ್ಲಿ ತಿಳಿಸಿದೆ.

More articles

Latest article