ಬೆಂಗಳೂರು: ನಮ್ಮ ಸರ್ಕಾರದ ದೂದೃಷ್ಟಿಯ ಯೋಜನೆಗಳು, ಬೆಳವಣಿಗೆಯ ಸ್ಪಷ್ಟ ಚಿತ್ರಣವು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತುತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿಯ ಮುನ್ನೋಟ ಅಡಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಶರಣ್ ಪ್ರಕಾಶ್ ಪಾಟೀಲ್, ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಜನಪರ ಸೇವೆ ಕೈಗೊಂಡಿದೆ. ರಾಜ್ಯಪಾಲರ ಭಾಷಣದಲ್ಲಿ ಇದು ಮನದಟ್ಟಾಗಿದೆ. ಇದರ ಜೊತೆಗೆ ಅಭಿವೃದ್ಧಿಯ ಗ್ಯಾರಂಟಿಗೂ ಸರ್ಕಾರ ಒತ್ತು ನೀಡಿದೆ ಎಂಬುದನ್ನು ವಿವರಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಾದೇಶಿಕ ಅಸಮತೋಲನ ನಿವಾರಿಸಲು ಹಾಗೂ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಮುಂದಾಗಿದ್ದು, ಇದಕ್ಕೆ 37662 ಕೋಟಿ ರೂಪಾಯಿ ಮಾಡಿರುವುದು ಗಮನಾರ್ಹ ಸಾಧನೆ ಎಂದು ರಾಜ್ಯಪಾಲರ ಭಾಷಣದಲ್ಲಿ ಬಣ್ಣಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
2024-25 ಸಾಲಿನ ಬಜೆಟ್ನಲ್ಲಿ ಘೋಷಿಸಲಾದ 344 ಕಾರ್ಯಕ್ರಮಗಳ ಪೈಕಿ 331ಕ್ಕೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಇದು ಸರ್ಕಾರದ ಬದ್ಧತೆ ಸಾಕ್ಷಿಯಾಗಿದೆ. ಎಂಎಸ್ಎAಇ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲಾಗಿದೆ. ಇದಕ್ಕಾಗಿ 687 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಭಾಷಣದಲ್ಲಿ ವಿವರಿಸಲಾಗಿದೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಕೆಕೆಆರ್ಡಿಬಿ ವತಿಯಿಂದ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಲೋಕಾರ್ಪಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ ಎಂದರು.
ಕೌಶಲ್ಯಾಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ 89 ಸರ್ಕಾರಿ ಕಾಲೇಜುಗಳ 30 ಸಾವಿರ ವಿದ್ಯಾರ್ಥಿಗಳಿಗೆ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿವರಿಸಿದ್ದಾರೆ ಎಂದು ಸಚಿವರು ಹೇಳಿದರು. ಒಟ್ಟಾರೆಯಾಗಿ ರಾಜ್ಯಪಾಲರ ಭಾಷಣ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿದೆ ಮತ್ತು ದಿಕ್ಸೂಚಿಯಾಗಿದೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.