ಅಕ್ರಮ ಚಿನ್ನ ಸಾಗಾಣೆ: ನಟಿ ರನ್ಯಾ ರಾವ್‌ ವಶಕ್ಕೆ

Most read

ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಷಯ ಸ್ಯಾಂಡಲ್‌ ವುಡ್‌ ನಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ರನ್ಯಾರಾವ್‌ ಅವರು ಸುದೀಪ್ ನಟನೆಯ ಮಾಣಿಕ್ಯ ಹಾಗೂ ಗಣೇಶ್‌ ಜತೆ ಪಟಾಕಿ ಸಿನಿಮಾದಲಿ ಅಭಿನಯಿಸಿದ್ದರು.

ನಟಿ ರನ್ಯಾ ರಾವ್ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯೂ ದು. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್​ಪೋರ್ಟ್​ ಕಸ್ಟಮ್ಸ್​ನ ಡಿಆರ್​ಐ ಅಧಿಕಾರಿಗಳು ರನ್ಯಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ  ಆರೋಪ ರನ್ಯಾ ಅವರ ಮೇಲಿದೆ.

ಮೂಲತಃ ಚಿಕ್ಕಮಗಳೂರಿನವರಾದ ರನ್ಯಾ ಜನಿಸಿದ್ದು 1991ರಲ್ಲಿ. ನಟನಾ ವೃತ್ತಿ ಆರಂಭಿಸುಯವ ಸಲುವಾಗಿಯೇ ಬೆಂಗಳೂರಿಗೆ ಬಂದು ನೆಲೆಸಿದ್ದರು. 2014ರಲ್ಲಿ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ್ದರು. ಈ ಚಿತ್ರದಲ್ಲಿ ಮಾನಸಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರು. 2016ರಲ್ಲಿ ತಮಿಳಿನ ಸಿನಿಮಾದಲ್ಲೂ ನಟಿಸಿದರಾದರೂ ಅಷ್ಟಾಗಿ ಗೆಲುವು ತಂದುಕೊಡಲಿಲ್ಲ.

2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಪಟಾಕಿ’ ಸಿನಿಮಾದಲ್ಲಿ ಸಂಗೀತಾ ಹೆಸರಿನ ಪಾತ್ರ ಮಾಡಿದರು. ನಂತರ ಅವರಿಗೆ ನಟಿಸಲು ಆಹ್ವಾನವೇ ಇರಲಿಲ್ಲ. ಅಲ್ಲಿಂದೀಚೆಗೆ ಅವರು ಬಣ್ಣ ಹಚ್ಚಿರಲಿಲ್ಲ. ಇದೀಗ ಅವರು ಅಕ್ರಮ ಚಿನ್ನ ಸಾಗಣೆ ಮಾಡಿದ ಆರೋಪದಲ್ಲಿ ಸುದ್ದಿಯಾಗಿದ್ದಾರೆ.

More articles

Latest article