ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ; ರೂ.17 ಲಕ್ಷ ಮೌಲ್ಯದ ಮಾದಕವಸ್ತು ಜಪ್ತಿ

Most read

ಬೆಂಗಳೂರು: ಸಿಸಿಬಿ ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಇಂದು ಬೆಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತ ಆರೋಪಿಗಳು. ಆರೋಪಿಗಳಿಂದ ರೂ. 17 ಲಕ್ಷ ಮೌಲ್ಯದ 108 ಗ್ರಾಂ ಎಂಡಿಎಂಎ, ಎರಡು ಮೊಬೈಲ್ಗಳನ್ನು ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಮುಂಬೈನಿಂದ ಮಾದಕ ದ್ರವ್ಯ ತಂದು ಪರಿಚಯಸ್ಥರು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ನೆಲೆಸಿದ್ದಾರೆ. ಈ ಹಿಂದೆಯೂ ಇವರು ಡ್ರಗ್ಸ್ ಮಾರಾಟ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಮತ್ತೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಇಳಿದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

More articles

Latest article