ಆಯವ್ಯಯ 2025-26 ರ ಮುಖ್ಯಾಂಶಗಳುಆಯವ್ಯಯ ಪಕ್ಷಿನೋಟ

Most read


• ಆಯವ್ಯಯ ಗಾತ್ರ (ಸಂಚಿತ ನಿಧಿ) ೪,೦೯,೫೪೯ ಕೋಟಿ ರೂ.ಗಳು
• ಒಟ್ಟು ಸ್ವೀಕೃತಿ – 4,08,647 ಕೋಟಿ ರೂ.; ರಾಜಸ್ವ ಸ್ವೀಕೃತಿ ೨,೯೨,೪೭೭ ಕೋಟಿ ರೂ.; ಸಾರ್ವಜನಿಕ ಋಣ-೧,೧೬,೦೦೦ ಕೋಟಿ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 1,16,17೦ ಕೋಟಿ ರೂ.
• ಒಟ್ಟು ವೆಚ್ಚ-೪,೦೯,೫೪೯ ಕೋಟಿ ರೂ. ರಾಜಸ್ವ ವೆಚ್ಚ-೩,೧೧,೭೩೯ ಕೋಟಿ ರೂ., ಬಂಡವಾಳ ವೆಚ್ಚ-೭೧,೩೩೬ ಕೋಟಿ ರೂ. ಹಾಗೂ ಸಾಲ ಮರುಪಾವತಿ- ೨೬,೪೭೪ ಕೋಟಿ ರೂ.
• ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ ೪೨,೦೧೮ ಕೋಟಿ ರೂ. ಎಸ್.ಸಿ.ಎಸ್.ಪಿ. ಅಡಿ ೨೯,೯೯೨ ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 1೨,೦೨೬ ಕೋಟಿ ರೂ.
• ಮಹಿಳಾ ಆಯವ್ಯಯದಲ್ಲಿ ಒದಗಿಸಿದ ಅನುದಾನ ೯೪,೦೮೪ ಕೋಟಿ ರೂ.
• ಮಕ್ಕಳ ಆಯವ್ಯಯದಲ್ಲಿ ಒದಗಿಸಿದ ಅನುದಾನ- ೬೨,೦೩೩ ಕೋಟಿ ರೂ.
• ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ 8000 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ.

ಕೃಷಿ

  1. ರೈತ ಸಮೃದ್ಧಿ ಯೋಜನೆಯಡಿ ೧೦ ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳ ಅಭಿವೃದ್ಧಿ
  2. ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
  3. ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ
  4. ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ.
  5. ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
  6. ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
  7. ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
  8. ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
  9. ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
  10. ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
  11. 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
  12. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
  13. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ.
  14. ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
  15. ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ
    ತೋಟಗಾರಿಕೆ
  16. 95 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಜಾರಿ.
  17. ತೋಟಗಾರಿಕಾ ಬೆಳೆಗಳ ಕುರಿತು ರೈತರಿಗೆ ನೈಜ ಸಮಯದ ಮಾಹಿತಿ ನೀಡುವ ಜ್ಞಾನಕೋಶ ಸ್ಥಾಪನೆ.
  18. ರಾಜ್ಯದ GI ಟ್ಯಾಗ್‌ ಹೊಂದಿದ ಹಾಗೂ ದೇಸಿ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸಲು ಬೀಜ ಬ್ಯಾಂಕ್ ಸ್ಥಾಪನೆ.
  19. ಬ್ಯಾಡಗಿ ಮೆಣಸಿನಕಾಯಿಯನ್ನು ರೋಗಗಳಿಂದ ಸಂರಕ್ಷಿಸಲು ಸಂಶೋಧನೆಗೆ ಉತ್ತೇಜನ.
  20. ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿಯಡಿ ೫೨,೦೦೦ ಬೆಳೆಗಾರರಿಗೆ ೪೨೬ ಕೋಟಿ ಸಹಾಯಧನ ಒದಗಿಸಲು ಕ್ರಮ
  21. ಇಲಾಖೆಯ ಕ್ಷೇತ್ರಗಳಡಿ ತೋಟಗಾರಿಕಾ ಪ್ರವಾಸೋದ್ಯಮಕ್ಕೆ ಉತ್ತೇಜನ
  22. ಗದಗ ಜಿಲ್ಲೆಯ ಡಂಬಳದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ.
    ರೇಷ್ಮೆ
  23. ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ
  24. ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ 250 ಕೋಟಿ ರೂ.
  25. ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಾಪನೆಗೆ ಕ್ರಮ.
  26. ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣಕ್ಕಾಗಿ Assayer ಗಳ ನಿಯೋಜನೆ
  27. ರೇಷ್ಮೆ ಅಭಿವೃದ್ಧಿ ಯೋಜನೆಗೆ 55 ಕೋಟಿ ರೂ. ಅನುದಾನ
    ಪಶುಸಂಗೋಪನೆ
  28. “ಅನುಗ್ರಹ” ಯೋಜನೆಯಡಿ ಪರಿಹಾರ ಮೊತ್ತ ಹೆಚ್ಚಳ; ಹಸು, ಎಮ್ಮೆ ಮತ್ತು ಎತ್ತುಗಳಿಗೆ 15 ಸಾವಿರ ರೂ., ಕುರಿ/ ಮೇಕೆಗಳಿಗೆ 7500 ರೂ., ಕುರಿ/ ಮೇಕೆ ಮರಿಗಳಿಗೆ 5 ಸಾವಿರ ರೂ. ಗಳಿಗೆ ಹೆಚ್ಚಳ.
  29. 50 ನೂತನ ಪಶು ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಕ್ರಮ.
  30. 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳ ನಿರ್ಮಾಣ
  31. ರಾಜ್ಯದ ದೇಶಿ ದನ ಹಾಗೂ ಕುರಿ ತಳಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಎರಡು ಕೋಟಿ ರೂ.
    ಮೀನುಗಾರಿಕೆ
  32. ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜು ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ
  33. ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ ರೂ.
  34. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.
  35. ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಮೀರಿದ ಇಂಜಿನ್ ಬದಲಾವಣೆಗೆ ಗರಿಷ್ಠ ಒಂದು ಲಕ್ಷ ರೂ. ಸಹಾಯಧನ.
  36. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ “ಮಲ್ಟಿ ಲೆವಲ್ ಪಾರ್ಕಿಂಗ್” ವ್ಯವಸ್ಥೆ ನಿರ್ಮಾಣ
  37. ಆಳ ಸಮುದ್ರ ಮೀನುಗಾರಿಕೆ ಪ್ರೋತ್ಸಾಹಿಸಲು ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಸಲು ಕ್ರಮ
  38. ರಾಜ್ಯದಲ್ಲಿ ಹೊಸ ಮೀನುಗಾರಿಕಾ ನೀತಿ ಜಾರಿ
    ಸಹಕಾರ
  39. 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಣೆ ಗುರಿ.
  40. 3 ಸಾವಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಸಂಪೂರ್ಣ ಗಣಕೀಕರಣಕ್ಕೆ ಕ್ರಮ.
  41. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ರಾಜ್ಯ ಸರ್ಕಾರದ ವತಿಯಿಂದ ಕ್ವಿಂಟಾಲ್ಗೆ 450 ರೂ. ಗಳಂತೆ ಒಟ್ಟು 138 ಕೋಟಿ ರೂ. ಹೆಚ್ಚುವರಿ ಪ್ರೋತ್ಸಾಹಧನ
  42. ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು 47 ಕೋಟಿ ರೂ. ಅನುದಾನ.
  43. ಎಪಿಎಂಸಿಗಳಲ್ಲಿನ ಪರವಾನಿಗೆ ಹೊಂದಿದ ಶ್ರಮಿಕರ ಮರಣಾನಂತರದ ವಿಮಾ ಪರಿಹಾರ ಮೊತ್ತ ಐದು ಲಕ್ಷ ರೂ.ಗಳಿಗೆ ಹೆಚ್ಚಳ.
  44. ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಸ್ಥಾಪನೆ.
  45. ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪನೆ.
  46. ಕಲಬುರಗಿಯಲ್ಲಿ ನೂತನ ಮೆಗಾ ಡೈರಿ ಪ್ರಾರಂಭಿಸಲು 50 ಕೋಟಿ ರೂ. ಅನುದಾನ ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ಸಹಕಾರ ಭವನ ನಿರ್ಮಾಣ.
  47. ಕಲ್ಯಾಣ ಕರ್ನಾಟಕದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಉಗ್ರಾಣಗಳ ನಿರ್ಮಾಣ.

More articles

Latest article