ಬಜೆಟ್ ಹೈಲೈಟ್ಸ್: ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 15,767 ಕೋಟಿ ರೂ. ಅನುದಾನ

Most read

ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ

• ವಿಜಯಪುರ ವಿಮಾನ ನಿಲ್ದಾಣ 2025-26 ಕಾರ್ಯಾರಂಭ.
• ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗಳಿಗೆ 53 ಕೋಟಿ ರೂ. ಅನುದಾನ ಬಿಡುಗಡೆ.
• ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ಭೂ ಸ್ವಾಧಿನ ಪ್ರಕ್ರಿಯೆ ಜಾರಿಯಲ್ಲಿದೆ
• ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ 319 ಕೋಟಿ ರೂ. ಅನುದಾನ ಬಿಡುಗಡೆ.
• 2025-26ನೇ ಸಾಲಿನಲ್ಲಿ, ರೈಲ್ವೇ ಯೋಜನೆಗಳಿಗೆ 600 ಕೋಟಿ ರೂ. ಮೀಸಲು.
• ರೈಲ್ವೆ ಮೇಲ್ಸೇತುವೆ/ಕೆಳಸೇತುವೆ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ.
• ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣಕ್ಕೆ 406 ಕೋಟಿ ರೂ. ಅನುದಾನ.
• ಬೆಂಗಳೂರು ಉಪನಗರ ರೈಲ್ವೆ ಯೋಜನೆ 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
• ಜಲಸಾರಿಗೆ ಅಭಿವೃದ್ಧಿಗೆ ಪೂರಕವಾಗಿ ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದರು ಅಭಿವೃದ್ದಿ ಮತ್ತು ಪ್ರವಾಸೋದ್ಯಮಕ್ಕೆ ಅನುಮೋದನೆ.
• ಕಡಲು ಕೊರೆತ ತಡೆಗಟ್ಟಲು ಶೋರ್ಲೈನ್ ಮ್ಯಾನೇಜ್ಮೆಂಟ್ ಪ್ಲಾನ್ ಪ್ರಕಾರ ಹಂತಹಂತವಾಗಿ ಕಾಮಗಾರಿ ಅನುಷ್ಠಾನ.
• ಮಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರ ಸ್ಥಾಪನೆ.
• ದೇವನಹಳ್ಳಿಯಲ್ಲಿ 407 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ.

ಲೋಕೋಪಯೋಗಿ

• 1,೮೫0 ಕಿ.ಮೀ. ರಾಜ್ಯ ಹೆದ್ದಾರಿ ಹಾಗೂ ೨,೫೭೦ ಕಿ.ಮೀ. ಜಿಲ್ಲಾ ರಸ್ತೆಗಳನ್ನು ರೂ. ೪,೮೪೮ ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಕ್ರಮ.
• ರಾಯಚೂರು ಹಾಗೂ ಬೈಲಹೊಂಗಲ ಪಟ್ಟಣದ ರಿಂಗ್ ರೋಡ್, ವಾಗ್ದಾರಿ-ರಿಬ್ಬನ್ಪಲ್ಲಿ ಮತ್ತು ಮದ್ದೂರು ರಸ್ತೆಯ ಅಗಲೀಕರಣದ ಕಾಮಗಾರಿಗಳ ವಿಸ್ತೃತ ಅಂದಾಜು ತಯಾರಿಕೆ.
• ದಕ್ಷಿಣ ಕನ್ನಡ, ವಿಜಯಪುರ, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಟ್ಟು 6 ಸೇತುವೆ ನಿರ್ಮಾಣಕ್ಕೆ ಅನುಮೋದನೆ.
• ಶಿಥಿಲಾವಸ್ಥೆಯಲ್ಲಿರುವ 39 ಸೇತುವೆಗಳ ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಸಾವಿರ ಕೋಟಿ ರೂ. ಯೋಜನೆ.
• ಕೊಡಗು ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಹಾನಿಯಾಗಿರುವ ರಸ್ತೆ ಮತ್ತು ಸೇತುವೆಗಳ ಪುನರ್ ನಿರ್ಮಾಣ.
• ರಾಯಚೂರು-ಸಿಂಧನೂರು ರಸ್ತೆ ಅಭಿವೃದ್ಧಿಯ 1,696 ಕೋಟಿ ರೂ. ಮೊತ್ತದ ಕಾಮಗಾರಿ ಈ ವರ್ಷ ಪೂರ್ಣ.
• ದೇವನಹಳ್ಳಿಯಿಂದ ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 3,190 ಕೋಟಿ ರೂ. ಮೊತ್ತದ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿ ಚುರುಕು.
• SHDP ಹಂತ-5 ರಡಿ ಪ್ರಸಕ್ತ ಸಾಲಿನಲ್ಲಿ 1,317 ಕಿ.ಮೀ ಉದ್ದದ ರಸ್ತೆ ಪೂರ್ಣಗೊಳಿಸಲು ಕ್ರಮ.
• ಕೆಶಿಪ್-4 ಯೋಜನೆಯಡಿ 5,736 ಕೋಟಿ ರೂ. ವೆಚ್ಚದಲ್ಲಿ 875 ಕಿ.ಮೀ ಉದ್ದದ ೧೧ ರಸ್ತೆಗಳನ್ನು ಅಭಿವೃದ್ದಿಗೊಳಿಸಲು ಕ್ರಮ.

ಇಂಧನ

  • “ಗೃಹ ಜ್ಯೋತಿ” ಯಡಿ ಇದುವರೆಗೆ 9657 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ 10,100 ಕೋಟಿ ರೂ. ಬಿಡುಗಡೆಗೆ ಕ್ರಮ.
  • ನೀರಾವರಿ ಪಂಪ್ಸೆಟ್ ವಿದ್ಯುತ್ ಸರಬರಾಜಿಗೆ ಸಹಾಯಧನದಡಿ 33.84 ಲಕ್ಷ ಪಂಪ್ಸೆಟ್ಗಳಿಗೆ 16,021 ಕೋಟಿ ರೂ. ನೆರವು.
  • ರಾಜ್ಯದ ಸ್ಥಾಪಿತ ಇಂಧನ ಸಾಮರ್ಥ್ಯವನ್ನು 32 ಗಿಗಾವ್ಯಾಟ್ ನಿಂದ 60 ಗಿಗಾವ್ಯಾಟ್ಗೆ ಹೆಚ್ಚಿಸಲು ಕ್ರಮ.
  • 800 ಮೆಗಾವ್ಯಾಟ್ ಸಾಮರ್ಥ್ಯದ ಗೋದ್ನಾ ಶಾಖೋತ್ಪನ್ನ ವಿದ್ಯುತ್ ಸ್ಥಾವರ ಕಾರ್ಯಗತಗೊಳಿಸಲು ನಿರ್ಧಾರ.
  • ಶರಾವತಿ ಪಂಪ್ಡ್ ಸ್ಟೋರೇಜ್ ಪವರ್ ಪ್ಲಾಂಟ್ ಅನುಷ್ಠಾನಕ್ಕಾಗಿ ಟೆಂಡರ್ ಪ್ರಕ್ರಿಯೆಗೆ ಚಾಲನೆ.
  • ಪಿಪಿಪಿ ಮಾದರಿಯಲ್ಲಿ 1,846 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಬ್ಯಾಟರಿ ಶಕ್ತಿ ಶೇಖರಣಾ ವ್ಯವಸ್ಥೆ.
  • ನೀರಾವರಿ ಪಂಪ್ಸೆಟ್ಗಳ ವಿಕೇಂದ್ರೀಕೃತ ಫೀಡರ್ ಸೌರೀಕರಣದಡಿ ಒಟ್ಟು 1,192 MW ಸಾಮರ್ಥ್ಯದ ಯೋಜನೆಗಳ ಅನುಷ್ಠಾನ.
  • ಸೋಲಾರ್ ಪಂಪ್ ಸೆಟ್ ಅಳವಡಿಸುವ ಯೋಜನೆಯಡಿ 40ಸಾವಿರ ಪಂಪ್ಸೆಟ್ಗಳಿಗೆ ಅನುಮೋದನೆ, 752 ಕೋಟಿ ರೂ. ವೆಚ್ಚ.
  • 8,833 ಕೋಟಿ ರೂ. ವೆಚ್ಚದಲ್ಲಿ 100 ಉಪಕೇಂದ್ರ ಸ್ಥಾಪನೆ.
  • ಗಂಗಾ ಕಲ್ಯಾಣ ಯೋಜನೆಯಡಿ 25,971 ಕೊಳವೆ ಬಾವಿಗಳ ಹಾಗು 6,887 ಕುಡಿಯುವ ನೀರಿನ ಯೋಜನೆಗಳ ವಿದ್ಯುದೀಕರಣ, 1.94 ಲಕ್ಷ ವಿತರಣಾ ಪರಿವರ್ತಕಗಳ ಅಳವಡಿಕೆ.
  • ಗ್ರಾಮ ಪಂಚಾಯತಿಗಳಲ್ಲಿ, 850 ಕೋಟಿ ರೂ. ವೆಚ್ಚದಲ್ಲಿ Phase wire ಅಳವಡಿಸುವ ಕಾಮಗಾರಿ ಅನುಷ್ಠಾನ.
  • ನವೀಕರಿಸಬಹುದಾದ ಇಂಧನ ಸ್ಥಾವರಗಳ ಸ್ಥಾಪನೆಗೆ ಕೃಷಿ ಭೂಮಿಗೆ ಭೂ ಪರಿವರ್ತನೆ ಪ್ರಕ್ರಿಯೆಯಿಂದ ವಿನಾಯಿತಿ.
  • ವಿದ್ಯುತ್ ಪ್ರಸರಣ ವಲಯದಲ್ಲಿ InvIT ಮಾದರಿಯಲ್ಲಿ 5 ಸಾವಿರ ಕೋಟಿ ರೂ. ಹೂಡಿಕೆ ಸಂಗ್ರಹ ಗುರಿ.

More articles

Latest article