ಕನ್ನಡ ಮತ್ತು ಸಂಸ್ಕೃತಿ
• ಬಾದಾಮಿಯಲ್ಲಿ ಚಾಲುಕ್ಯ ಉತ್ಸವದಲ್ಲಿ ನೃತ್ಯೋತ್ಸವ ಕಾರ್ಯಕ್ರಮ ಆಯೋಜನೆಗೆ 2 ಕೋಟಿ ರೂ. ಅನುದಾನ.
• ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಬೊಳುವಾರು ಮೊಹಮ್ಮದ್ ಕುಂಞಿ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿ ನಾಟಕಕ್ಕೆ ರೂಪಾಂತರಿಸಿ, ಪ್ರದರ್ಶಿಸಲು 1 ಕೋಟಿ ರೂ.
• ʻಕನ್ನಡ ಭಾರತಿʼ ಪುಸ್ತಕ ಮಾಲಿಕೆಯಡಿ ವಿವಿಧ ಕ್ಷೇತ್ರಗಳ ಸಾಧಕರನ್ನು ಪರಿಚಯಿಸುವ ಪುಸ್ತಕ ಪ್ರಕಟಣೆಗೆ ಕ್ರಮ.
• ದಾವಣಗೆರೆಯ ವೃತ್ತಿರಂಗಭೂಮಿ ರಂಗಾಯಣದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ, ವೃತ್ತಿ ರಂಗಾಯಣ ಸಮುಚ್ಛಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣ.
• ಕಲಾವಿದರ ಮಾಸಾಶನ 2500 ರೂ. ಗಳಿಗೆ ಹೆಚ್ಚಳ.
• ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ 2,500 ಪ್ರಾಚೀನ ತಾಳೆಗರಿಯ ಹಸ್ತಪ್ರತಿಗಳ ಡಿಜಿಟಲೀಕರಣ ಯೋಜನೆ
• ಮೈಸೂರಿನ ರಂಗಾಯಣದ ಕಾರ್ಯಚಟುವಟಿಕೆಗಳಿಗೆ 2 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
• ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರಕ್ಕೆ ತತ್ವಪದ ಪಾರಿಭಾಷಿಕ ಪದಕೋಶದ ಸಿದ್ಧತೆ ಮತ್ತು ಪ್ರಕಟಣೆ ಕಾರ್ಯಕ್ಕಾಗಿ ಒಂದು ಕೋಟಿ ರೂ.
ಪ್ರವಾಸೋದ್ಯಮ
• ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು (Highway Hubs) ಉನ್ನತೀಕರಿಸಲು ಕ್ರಮ.
• ವಿಶೇಷ ಬಂಡವಾಳ ಯೋಜನೆಯಡಿ ಒಟ್ಟಾರೆ 199 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿರುವ ದೇವಿಕಾರಾಣಿ ರೋರಿಚ್ ಎಸ್ಟೇಟ್ ಅಭಿವೃದ್ಧಿ
• ರಾಜ್ಯದ ಆಯ್ದ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ.
• ಪ್ರವಾಸಿ ಮಿತ್ರರ ಸಂಖ್ಯೆ 1,000 ಕ್ಕೆ ಹೆಚ್ಚಳ ಹಾಗೂ 24X7 ಪ್ರವಾಸಿ ಸಹಾಯವಾಣಿ ತೆರೆಯಲು ಕ್ರಮ.
• ರಾಜ್ಯದ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಸಂಗ್ರಹಿಸಲು ONE- TAC Digital Grid ಬಳಕೆ.
• ಐತಿಹಾಸಿಕ ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ.
• ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿ (ಅಠಾರ ಕಛೇರಿ) ಕಟ್ಟಡವನ್ನು ರಾಜ್ಯ ಮಟ್ಟದ ವಸ್ತುಸಂಗ್ರಹಾಲಯವಾಗಿ ಪರಿವರ್ತನೆ.
ಯುವಸಬಲೀಕರಣ ಮತ್ತು ಕ್ರೀಡೆ
• ಗುರಿ-ಒಲಿಂಪಿಕ್ ಪದಕ ಯೋಜನೆಯಡಿ ಒಲಿಂಪಿಕ್ಸ್ 2028 ಗೆ ತಯಾರಿ ಕೈಗೊಳ್ಳಲು ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ.ದಂತೆ ಪ್ರೋತ್ಸಾಹ ಧನ ವಿತರಣೆ. ಈ ವರ್ಷಕ್ಕೆ 6 ಕೋಟಿ ರೂ. ನೆರವು.
• ತಲಾ 2 ಕೋಟಿ ರೂ. ವೆಚ್ಚದಲ್ಲಿ 12 ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳ ನಿರ್ಮಾಣ; ಈ ಕಾಮಗಾರಿಗಳಿಗೆ 12 ಕೋಟಿ ರೂ. ಹಂಚಿಕೆ.
• ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಜಿಲ್ಲಾ ಕ್ರೀಡಾಂಗಣದಲ್ಲಿ ಒಟ್ಟು
3 ಕೋಟಿ ರೂ. ವೆಚ್ಚದಲ್ಲಿ ಶೂಟಿಂಗ್ ರೇಂಜ್ ನಿರ್ಮಾಣ.
• ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹ ಹಾಗೂ ಬುಡಕಟ್ಟು ಜನಾಂಗದವರಿಗೆ ಕ್ರೀಡಾಕೂಟ ಆಯೋಜನೆಗೆ 2 ಕೋಟಿ ರೂ.
• ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕೆ 3 ಕೋಟಿ ರೂ.; ಯಾದಗಿರಿಯ ಶಹಾಪುರದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆ ಪ್ರಾರಂಭ.
• 7 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾನ.
• ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ; ಸೈಕ್ಲಿಂಗ್ ಉತ್ತೇಜನಕ್ಕೆ ೫ ಕೋಟಿ ರೂ. ವೆಚ್ಚದಲ್ಲಿ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ; ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ 6 ಕೋಟಿ ರೂ.
• ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳ ಅಂತಾರಾಷ್ಟ್ರೀಯ ಮಟ್ಟಕ್ಕೆ ಉನ್ನತೀಕರಣ. ಚಾಮರಾಜನಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒಲಿಂಪಿಕ್ ಮಾದರಿಯ (50 ಮೀಟರ್) ಈಜುಕೊಳ ನಿರ್ಮಾಣ.
• ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಖೋಖೋ ಅಕಾಡೆಮಿ ಸ್ಥಾಪನೆಗೆ
2 ಕೋಟಿ ರೂ.
• ಕ್ರೀಡಾಪಟುಗಳು ತರಬೇತಿ ಪಡೆಯಲು ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಹಕಾರಿಯಾಗುವಂತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗಿನ ಕ್ರೀಡಾಪಟುಗಳಿಗೆ ಶೇ.15 ರಷ್ಟು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ.
• ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ಶೇ.5ರಷ್ಟು ಕೃಪಾಂಕ
• ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ. ವರೆಗೆ ನೆರವು
• ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000 ರೂ.ಗಳಿಗೆ, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ರೂ.ಗಳಿಗೆ ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ. ಗಳಿಗೆ ಹೆಚ್ಚಳ
• ಯಲಬುರ್ಗಾ ಮತ್ತು ಟಿ.ನರಸೀಪುರದಲ್ಲಿ ಕ್ರೀಡಾಂಗಣಗಳ ಅಭಿವೃದ್ಧಿಗೆ ಆರು ಕೋಟಿ ರೂ. ಅನುದಾನ