ಆಂಧ್ರಪ್ರದೇಶ: ಹೆಚ್ಚು ಮಕ್ಕಳು ಹೊಂದಲು ಹೆರಿಗೆ ರಜೆಗಿದ್ದ ಮಿತಿಗಳು ತೆರವು

Most read

ಹೈದರಾಬಾದ್‌: ದಕ್ಷಿಣ ರಾಜ್ಯಗಳಲ್ಲಿ ಜನನ ಪ್ರಮಾಣ ಕುಸಿತವಾಗುತ್ತಿರುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮಹಿಳಾ ನೌಕರರಿಗೆ ಹೆರಿಗೆ ರಜೆ ಮೇಲಿದ್ದ ನಿರ್ಬಂಧಗಳನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೆರವುಗೊಳಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಎಲ್ಲ ಮಹಿಳಾ ನೌಕರರು ಎಷ್ಟೇ ಮಕ್ಕಳನ್ನು ಹೊಂದಿದರೂ ಹೆರಿಗೆ ರಜೆ ನೀಡಲಾಗುವುದು’ ಎಂದು ಘೋಷಿಸಿದ್ದಾರೆ.

ಈ ಮೂಲಕ ಮುಖ್ಯಮಂತ್ರಿ ಅವರು, ಎಲ್ಲ ಮಹಿಳೆಯರೂ ಸಾಧ್ಯವಾದಷ್ಟು ಹೆಚ್ಚು ಮಕ್ಕಳನ್ನು ಹೊಂದುವಂತೆ ಸಂದೇಶ ರವಾನಿಸಿದ್ದಾರೆ ಎಂದು ಟಿಡಿಪಿ ನಾಯಕರೊಬ್ಬರು ಹೇಳಿದ್ದಾರೆ. ಹೆರಿಗೆ ರಜೆಯ ಅರ್ಹತೆ ಕುರಿತ ಸಂದೇಹವನ್ನು ಕಾನ್‌ಸ್ಟೆಬಲ್‌ ಒಬ್ಬರು ಶುಕ್ರವಾರವಷ್ಟೇ ಗೃಹ ಸಚಿವರ ಬಳಿ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿ ಅವರ ನಿರ್ಧಾರದಿಂದ ಈ ಬಗ್ಗೆ ಸ್ಪಷ್ಟತೆ ದೊರೆತಂತಾಗಿದೆ ಎಂದು ಅವರು ತಿಳಿಸಿದ್ದಾರೆ.

More articles

Latest article