Thursday, December 11, 2025

ಬಾಂಬ್‌ ಬೆದರಿಕೆ: ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್

Most read

ಮುಂಬೈ: ಶೌಚಾಲಯದಲ್ಲಿ ಬಾಂಬ್‌ ಬೆದರಿಕೆ ಸಂದೇಶವಿರುವ ಚೀಟಿ ಪತ್ತೆಯಾದ ಕಾರಣ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಮುಂಬೈ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

19 ಸಿಬ್ಬಂದಿ ಸೇರಿ 320ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಿಮಾನ ಸುರಕ್ಷಿತವಾಗಿ ಮುಂಬೈನಲ್ಲಿ ಬಂದಿಳಿದಿದೆ. 

ಪ್ರಯಾಣಿಕರೊಬ್ಬರು ಶೌಚಾಲಯಕ್ಕೆ ತೆರಳಿದ್ದ ವೇಳೆ ಈ ವಿಮಾನದಲ್ಲಿ ಬಾಂಬ್‌ ಇದೆ ಎಂದು ಬರೆದಿದ್ದ ಚೀಟಿ ಸಿಕ್ಕಿದ್ದು, ತಕ್ಷಣವೇ ಅವರು ಅದನ್ನು ಸಿಬ್ಬಂದಿಗೆ ನೀಡಿದ್ದಾರೆ. ಬಳಿಕ ವಿಮಾನವನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಗಿದೆ. ಚೀಟಿಯನ್ನು ಹೊರತುಪಡಿಸಿದರೆ ಬೇರೆ ಹೊರತಾಗಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದ ಅಪರಿಚಿತ ವ್ಯಕ್ತಿಯ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ ಮತ್ತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

AI119 ಮುಂಬೈ– ನ್ಯೂಯಾರ್ಕ್ ವಿಮಾನದಲ್ಲಿ ಬೆದರಿಕೆ ಸಂದೇಶ ಪತ್ತೆಯಾದ ಕಾರಣ ವಿಮಾನ ಮುಂಬೈಗೆ ಮರಳಿದೆ. ಸೋಮವಾರ ಬೆಳಿಗ್ಗೆ 10.25ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ. ಎಲ್ಲಾ ಪ್ರಯಾಣಿಕರಿಗೂ ಊಟ, ಉಳಿಯುವ  ವ್ಯವಸ್ಥೆ ಮಾಡಲಾಗಿದ್ದು, ಮಂಗಳವಾರ ಬೆಳಿಗ್ಗೆ 5 ಗಂಟೆಗೆ ವಿಮಾನದ ಪ್ರಯಾಣವನ್ನು ಮರುನಿಗದಿ ಮಾಡಲಾಗಿದೆ ಎಂದು ಏರ್‌ ಇಂಡಿಯಾ ಮಾಹಿತಿ ನೀಡಿದೆ.

More articles

Latest article