ಬೆಂಗಳೂರು: ಬಾಸ್ಕೆಟ್ ಬಾಲ್ ಕೋಚ್ ಒಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ವರದಿಯಾಗಿದೆ. ಸೋನಿಯಾ (26) ಆತ್ಮಹತ್ಯೆಗೆ ಶರಣಾದ ಕೋಚ್. ಪೋತ್ಲಪ್ಪ ಗಾರ್ಡನ್ ನಲ್ಲಿರುವ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಡುಗೋಡಿ ಠಾಣೆಯಲ್ಲಿಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ. ಸೋನಿಯಾ ಕಳೆದ ಏಳೆಂಟು ವರ್ಷಗಳಿಂದ ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ, ರಾಷ್ಟ್ರಮಟ್ಟದಲ್ಲಿ ಟೂರ್ನಿಗಳಲ್ಲಿ ಭಾಗಿಯಾಗಿದ್ದರು. ಮುಂದಿನ ತಿಂಗಳು ದುಬೈನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಇವರು ಆಡಬೇಕಿತ್ತು. ಆದರೆ, ನಿನ್ನೆ ಬೆಳಗ್ಗೆ ಹಠಾತ್ ಸಾವನ್ನಪ್ಪಿರುವುದು ಅನುಮಾನ ಹುಟ್ಟು ಹಾಕಿದೆ. ಸ್ನಾನ ಮಾಡುವಾಗ ಬಾತ್ ರೂಮ್ ನಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವಾಗಿದೆ ಎಂದಿದ್ದಾರೆ.
ಬಾಸ್ಕೆಟ್ ಬಾಲ್ ಕೋಚ್ ನಿಗೂಢ ಸಾವು