ಸಿಸಿಬಿ ಕಾರ್ಯಾಚರಣೆ; 55 ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನ, ಗಾಂಜಾ ವಶ; ಆರೋಪಿಗಳ ಬಂಧನ

Most read

ಬೆಂಗಳೂರು: ದುಷ್ಪರಿಣಾಮಗಳ ಕುರಿತು ಸೂಚಿಸುವ ಸೂಚನೆಗಳಿಲ್ಲದ ಹನ್ಸ್ ಹಾಗೂ ಗಣೇಶ ಕಂಪನಿಯ ತಂಬಾಕು ಉತ್ಪನ್ನಗಳನ್ನು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಉತ್ಪನ್ನಗಳ ಮೌಲ್ಯ 45 ಲಕ್ಷ ರೂ.ಗಳೆಂದು ಪೊಲೀಸರು ತಿಳಿಸಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗೋಡೌನ್‌ ಒಂದರಲ್ಲಿ ಸಂಗ್ರಹಿಸಲಾಗಿತ್ತು. ಅಕ್ರಮವಾಗಿ ಶೇಖರಿಸಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇತರೆ ಇಬ್ಬರು ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.

ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ರಾಣಾ ವ್ಯಾಪ್ತಿಯಲ್ಲಿರುವ ಕತ್ತರಿಗುಪ್ಪೆಯ ರಾಮ್ ರಾವ್ ಲೇ ಔಟ್  ಆಟದ ಮೈದಾನದಲ್ಲಿ ನಿಷೇದಿತ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಆತನಿಂದ 10 ಲಕ್ಷ 50 ಸಾವಿರ ರೂ. ಮೌಲ್ಯದ 1 ಕೆಜಿ 905 ಗ್ರಾಂ ಗಾಂಜಾ ಮತ್ತು ಎಂಡಿಎಂಎ ಕ್ರಿಸ್ಟಲ್‌ ಅನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಚನ್ನಮ್ಮಕೆರೆ ಅಚ್ಚುಕಟ್ಟು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

More articles

Latest article