ಪೋಕ್ಸೊ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್;‌ ಖುದ್ದು ಹಾಜರಾತಿಯಿಂದ ವಿನಾಯಿತಿ

Most read

ಬೆಂಗಳೂರು: ಪೋಕ್ಸೋ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂಪ್ಪ ಅವರಿಗೆ ಹೈಕೋರ್ಟ್‌ ರಿಲೀಫ್‌ ನೀಡಿದೆ. ಈ ಪ್ರಕರಣದಲ್ಲಿ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂಪ್ಪ ಅವರಿಗೆ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಹಾಗೆಯೇ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಮೂಮದಿನ ಆದೇಶದವರೆಗೂ ಅವರು ನ್ಯಾಯಾಲಯಕ್ಕೆ  ಹಾಜರಾಗುವ ಅವಶ್ಯಕತೆ ಇರುವುದಿಲ್ಲ.

ಈ ಹಿಂದೆ 1ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್‌ 15ರಂದು ಖುದ್ದು ಹಾಜರಾಗುವಂತೆ ಸಮನ್ಸ್‌ ನೀಡಿತ್ತು. ಇದರ ವಿರುದ್ದ ಎರಡು ದಿನಗಳ ಹಿಂದೆ ಈ ಸಮನ್ಸ್‌ ಅನ್ನು ಯಡಿಯೂರಪ್ಪ ಅವರು ಹೈಕೋರ್ಟ್‌ ನಲ್ಲಿ ಪ್ರಶ್ನಿಸಿದ್ದರು. ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ಯಡಿಯೂರಪ್ಪ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ವಾದಿಸಿದರೆ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ಮಧ್ಯಂತರ ತಡೆಯಾಜ್ಞೆಯನ್ನು ವಿರೋಧಿಸಿದರು. ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್‌ ನಾಯ್ಕ್‌ ಹಾಜರಾಗಿದ್ದರು.

ಸಿ.ವಿ.ನಾಗೇಶ್ ವಾದಿಸಿ ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆ‌ಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಒಂದು ತಿಂಗಳ ನಂತರ ಬಾಲಕಿಯ ತಾಯಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲ ಎಂದು ಸಾಕ್ಷ್ಯ ಹೇಳಿದ್ದಾರೆ. ಬಾಲಕಿ, ಬಾಲಕಿಯ ತಾಯಿಯ ಹೇಳಿಕೆ ಆಧಾರದಲ್ಲಿ ಆರೋಪಪಟ್ಟಿ ದಾಖಲಿಸಲಾಗಿದೆ. ತಾಯಿಯ ಮೊಬೈಲ್ ​ನಲ್ಲಿದ್ದ ಸಂಭಾಷಣೆಯನ್ನು ​ಯಡಿಯೂರಪ್ಪ ಅವರು ಅಳಿಸಿಲ್ಲ ಎಂದು ವಾದಿಸಿದರು.

42 ದಿನ ತಡವಾಗಿ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ. ಇಂತಹ ಘಟನೆ ನಿಜವಾಗಿಯೂ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ ಎಂದರು. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ನ್ಯಾಯಾಲಯ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ನಾಗೇಶ್‌ ವಾದಿಸಿದರು. ಅಡ್ವೊಕೇಟ್ ಜನರಲ್ ಅವರು ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್ ಸೂಚನೆಯಂತೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ ಸಮನ್ಸ್​​ಗೆ ತಡೆ ನೀಡದಂತೆ ಮನವಿ ಮಾಡಿಕೊಂಡರು.

More articles

Latest article