ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ. 12 ಕೆಜಿ 900 ಗ್ರಾಂ ಗಾಂಜಾ ಜಪ್ತಿ

Most read

ಬೆಂಗಳೂರು: ವೈಟ್‌ ಫೀಲ್ಡ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿರುತ್ತದೆ. ಸ್ಥಳಕಕೆ ಧಾವಿಸಿದ ವೈಟ್‌ ಫೀಲ್ಡ್ ಪೊಲೀಸರು ನಲ್ಲೂರಹಳ್ಳಿ ಕೆರೆಯ ಹತ್ತಿರ ಇಬ್ಬರು ವ್ಯಕ್ತಿಗಳನ್ನು ಕಾರು ಮತ್ತು ಗಾಂಜಾ ಸಹಿತ ಬಂಧಿಸಿದ್ದಾರೆ.

ಆರೋಪಿಗಳು ಒಡಿಸ್ಸಾ ಮತ್ತು ಆಂಧ್ರಪ್ರದೇಶದಿಂದ ಕಡಿಮೆ ಬೆಲೆಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 2 ಲಕ್ಷ ರೂ. ಮೌಲ್ಯದ 12 ಕೆಜಿ 900 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ 1 ಟೋಯೋಟಾ ಇಟಿಯೊಸ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

More articles

Latest article