ಕೋಲ್ಕತ್ತ: ವಾರದಲ್ಲಿ ಐದು ದಿನ ಕೆಲಸದ ನಿಯಮ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 24 ಮತ್ತು 25ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ತಿಳಿಸಿದೆ.
ನೌಕರರ ಬೇಡಿಕೆಗೆ ಸಂಬಂಧಿಸಿದಂತೆ ಭಾರತೀಯ ಬ್ಯಾಂಕ್‌ಗಳ ಒಕ್ಕೂಟದ (ಐಡಿಎ) ಜೊತೆಗೆ ಮಾತುಕತೆ ನಡೆಸಲಾಗಿತ್ತು. ಆದರೆ, ಸಕಾರಾತ್ಮಕ ಫಲಿತಾಂಶ ಹೊರಬಂದಿಲ್ಲ. ಓಾಗಾಗಿ, ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಯುಎಫ್‌ಬಿಯು ಪ್ರಧಾನ ಕಾರ್ಯದರ್ಶಿ ಎಲ್, ಚಂದ್ರಶೇಖರ್ ತಿಳಿಸಿದ್ದಾರೆ.
ಎಲ್ಲಾ ಕೇಡರ್‌ಗಳಿಗೆ ನೇಮಕಾತಿ ಮಾಡಬೇಕು ಎಂದು ಒಕ್ಕೂಟದ ಜೊತೆಗೆ ನಡೆದ ಸಭೆಯಲ್ಲಿ ಒತ್ತಾಯಿಸಲಾಗಿದೆ. ಆದರೆ, ಈ ಬಗ್ಗೆ ಗಮನಹರಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ನೌಕರರಿಗೆ ಗ್ರಾಚ್ಯುಟ ಮೊತ್ತದ ಮಿತಿಯನ್ನು ರೂ. 25 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಈ ಸೌಲಭ್ಯವನ್ನು ಬ್ಯಾಂಕ್ ನೌಕರರಿಗೂ ಕಲ್ಪಿಸಬೇಕಿದೆ. ಇದಕ್ಕೆ ಪೂರಕವಾಗಿ ಗ್ರಾಚ್ಯುಟಿ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದ್ದಾರೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಪ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ರಾಷ್ಟ್ರೀಯ ಬ್ಯಾಂಕ್ ನೌಕರರ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘವು ಯುಎಫ್‌ಬಿಯು ಅಡಿ ಬರುತ್ತವೆ.