ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ರಾಹುಲ್ ಗಾಂಧಿ

ನವದೆಹಲಿ: ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭೇಟಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧ ಬಲಪಡಿಸುವಿಕೆ ಸೇರಿ ಅನೇಕ ವಿಷಯಗಳನ್ನು ಚರ್ಚಿಸಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಮೂಲಗಳು ತಿಳಿಸಿವೆ. ಎರಡೂ ದೇಶಗಳ ಹಣಕಾಸಿನ ಒಪ್ಪಂದಗಳನ್ನು ಇನ್ನಷ್ಟು ವೃದ್ಧಿಸಿಕೊಳ್ಳುವ ಉದ್ದೇಶದಿಂದ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫ‌ರ್ ಲಕ್ಸನ್ ಅವರು ಐದು ದಿನಗಳ ಭೇಟಿಗಾಗಿ ಭಾರತಕ್ಕೆ ಭಾನುವಾರ ಬಂದಿದ್ದರು.

ಸೋಮವಾರ ಕ್ರಿಸ್ಟೋಫ‌ರ್ ಅವರನ್ನು ಭೇಟಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ವೇಳೆ ರಕ್ಷಣೆ ಹಾಗೂ ಹಿಂದೂ ಮಹಾಸಾಗರ ಪೆಸಿಫಿಕ್ ಸುರಕ್ಷತೆ ವಿಚಾರದಲ್ಲಿ ಹೆಚ್ಚಿನ ಸಹಭಾಗಿತ್ತ ಸೇರಿ ಹಲವು ವಿಷಯಗಳಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಆರು ಒಪ್ಪಂದಗಳು ಏರ್ಪಟ್ಟವು. ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಖಾಲಿಸ್ತಾನಿ ಪರ ಚಟುವಟಿಕೆಗಳ ಬಗ್ಗೆಯೂ ಭಾರತ ಕಳವಳ ವ್ಯಕ್ತಪಡಿಸಿತ್ತು.

More articles

Latest article

Most read