ಕೆಲಸಕ್ಕೆ ಸೇರಿದ 10 ದಿನದಲ್ಲೇ ಕೈಚಳಕ ತೋರಿಸಿದ ಕೆಲಸದಾಕೆ; 253 ಗ್ರಾಂ ಚಿನ್ನಾಭರಣ ಜಪ್ತಿ

ಬೆಂಗಳೂರು: ಕೇರ್ ಟೇಕರ್ ಕೆಲಸಕ್ಕೆ ಸೇರಿದ ಕೇವಲ ಹತ್ತು ದಿನಗಳಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆಕೆಲಸದ ಮಹಿಳೆ ಮತ್ತು ಆಕೆಯ ಪತಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 20.24 ಲಕ್ಷ ಮೌಲ್ಯದ 253 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಅಪಾರ್ಟ್‌ ಮೆಂಟ್‌ ವೊಂದರಲ್ಲಿ ವಾಸವಿರುವ ನಿವಾಸಿಯೊಬ್ಬರ ಅಜ್ಜಿ ಆನಾರೋಗ್ಯದಿಂದ ಬಳಲುತ್ತಿದ್ದು, ಅವರ ಆರೈಕೆಗಾಗಿ ಕಳೆದ ಡಿ.31 ರಂದು ಓರ್ವ ಮಹಿಳೆಯನ್ನು ಕೇರ್ ಟೇಕರ್ ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದರು. ಕೆಲಸದ ಅವಧಿಯಲ್ಲಿ ಮಾಲೀಕರಿಗೆ ತಿಳಿಯದಂತೆ ಈಕೆ ನಗದು ಮತ್ತು ಆಭರಣಗಳನ್ನು ಕಳ್ಳತನ ಮಾಡಿದ್ದಾಳೆ.

 ಈ ನಡುವೆ ಜ.11 ರಂದು ಈ ಮಹಿಳೆ ಮನೆಯಿಂದ ಹೋದ ಮೇಲೆ ಮರಳಿ ಕೆಲಸಕ್ಕೆ ಬಂದಿರುವುದಿಲ್ಲ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಕೆಲಸದಾಕೆಯ ಮೇಲೆ ಅನುಮಾನಗೊಂಡು, ಕೊಠಡಿಯ ಬೀರು ತೆಗೆದು ನೋಡಿದಾಗ ಅದರಲ್ಲಿದ್ದ ವಜ್ರ ಮತ್ತು ಚಿನ್ನಾಭರಣಗಳು ಹಾಗೂ 2,500 ನಗದು ಕಾಣೆಯಾಗಿತ್ತು.

ಕೂಡಲೇ ಅವರು ಕೇರ್‌ಟೇಕರ್ ಮಹಿಳೆಯ ಮೇಲೆ ಅನುಮಾನಗೊಂಡು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಮಹಿಳೆಯ ಬಗ್ಗೆ ಮಾಹಿತಿಯನ್ನು ಕಲೆಹಾಕಿ, ಹೆಚ್ ಬಿ ಆರ್ ಲೇಔಟ್ 4 ನೇ ಬ್ಲಾಕ್ ಹತ್ತಿರ ಮಹಿಳೆ ಹಾಗೂ ಆಕೆಯ ಪತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಿನ್ನಾಭರಣ ಹಾಗೂ ಹಣ ಕಳವು ಮಾಡಿರುವುದಾಗಿ ಹೇಳಿದ್ದಾಳೆ. ಈ ಹಿಂದೆ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿಯೂ ಸಹ ಮನೆ ಕಳವು ಮಾಡಿರುವುದಾಗಿ ತಿಳಿಸಿದ್ದು, ಪೊಲೀಸರು ಆಕೆಯಿಂದ 45 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಈ ದಂಪತಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಿದಾಗ ಕಳವು ಮಾಡಿದ ಚಿನ್ನಾಭರಣಗಳನ್ನು ಆಂಧ್ರಪ್ರದೇಶದ ನೆಲ್ಲೂರಿನ ಜ್ಯೂವೆಲರಿ ಅಂಗಡಿಯಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತತ್ತಾರೆ. ಜ್ಯೂವೆಲರಿ ಅಂಗಡಿಯ ಮಾಲೀಕನಿಗೆ ನೋಟಿಸ್‌ ಜಾರಿ ಮಾಡಿದ್ದು, ನಂತರ ಅವರು 70 ಗ್ರಾಂ ಚಿನ್ನಾಭರಣವನ್ನು ಠಾಣೆಗೆ ತಂದು ಒಪ್ಪಿಸಿದ್ದಾರೆ.

ಕೆಲವು ಆಭರಣಗಳನ್ನು ಜೆಪಿ ನಗರದ ಕೊತ್ತನೂರು ದಿಣ್ಣೆಯಲ್ಲಿ ವಾಸರುವ ಸ್ನೇಹಿತನಿಗೆ ನೀಡಿರುವುದಾಗಿ ತಿಳಿಸಿರುತ್ತಾರೆ. ಆತನಿಂದ 138 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆ ಆರೋಪಿಗಳಿಂದ 253 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ 20.24 ಲಕ್ಷ ರೂ. ಅಂದಾಜು ಮಾಡಲಾಗಿದೆ.

More articles

Latest article

Most read