ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.
ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ನಂತರ ಸರ್ಕಾರ ತನಿಖೆಗಾಗಿ ವಿಶೇಷ ತನಿಖಾ ದಳವನ್ನು ರಚಿಸಿತ್ತುಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ಗಳನ್ನು ಹಾಸನದಲ್ಲಿ ಹಂಚಿಕೆ ಮಾಡಲಾಗಿತ್ತು. ಕೆಲವು ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇನ್ನು ಈ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿ ಜಾಮೀನು ರದ್ದಾಗಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.