ಉತ್ತರಪ್ರದೇಶ: ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

Most read

ಹಮೀರಪುರ (ಉತ್ತರಪ್ರದೇಶ): ಯೋಗಿ ಆದಿತ್ಯನಾಥ ಮುಖ್ಯಮಂತ್ರಿಗಳಾಗಿರುವ ಉತ್ತರಪ್ರದೇಶದ ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ದುರುಳರು ಸತತ ಐದು ದಿನಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ, ಅದೇ ರಾಜ್ಯದ ಹಮೀರ್‌ ಪುರದಲ್ಲೂ ಅಂತಹುದ್ದೇ ಹೀನಾಯ ಕೃತ್ಯವೊಂದು ಜರುಗಿದೆ.

ಮಂಗಳವಾರ ರಾತ್ರಿ ಬಹಿರ್ದೆಸೆಗೆ ತೆರಳಿದ್ದ 21 ವರ್ಷದ ಯುವತಿ ಮೇಲೆ ಐವರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರ ಪ್ರಕರಣ ಸಂಬಂಧ ಎಫ್‌ ಐ ಆರ್ ದಾಖಲಾಗಿದೆ.ಈಗಾಗಲೇ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯೊಂದು ಖಚಿತಪಡಿಸಿದೆ.

ವಾರಾಣಸಿಯಲ್ಲಿ ನಡೆದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳನ್ನು ಬಂಧಿಸುವಂತೆ ಮತ್ತು ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು.

More articles

Latest article