ಕಾಶ್ಮೀರದಿಂದ ಕನ್ನಡಿಗರನ್ನು ಕರೆ ತರಲು ಪಹಲ್ಗಾಮ್‌ ಗೆ ತೆರಳಿರುವ ಸಚಿವ ಸಂತೋಷ್ ಲಾಡ್‌; ಹೆಲ್ಪ್‌ ಲೈನ್‌ ಆರಂಭ

Most read

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಮಂಗಳವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ನಿನ್ನೆ ಸಂಜೆಯೇ ರವಾನಿಸಲಾಗಿದೆ ಎಂದು ಎಕ್ಸ್‌ ಮೂಲಕ ಅವರು  ಮಾಹಿತಿ ಹಂಚಿಕೊಂಡಿದ್ದಾರೆ.. 

ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಸಿಎಂ ತಿಳಿಸಿದ್ದಾರೆ.

ಶ್ರೀನಗರಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಕಳುಹಿಸಲಾಗಿದೆ. ಅವರು ಈಗಾಗಲೇ ಪಹಲ್ಗಾಮ್‌ ತಲುಪಿದ್ದಾರೆ. ಅಲ್ಲಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರಿಗೆ ಸಂತೋಷ್ ಲಾಡ್ ಸಾಂತ್ವನ ಹೇಳಿದ್ದಾರೆ.

ಉಗ್ರರ ದಾಳಿಯಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬರು ಅಸು ನೀಗಿದ್ದಾರೆ.  ಆಂಧ್ರಪ್ರದೇಶದ ನೆಲ್ಲೂರು ಮೂಲದ ಮಧುಸೂದನ್ ಮೃತರು.  ಇವರೂ ಸಹ ಜಮ್ಮು- ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು.‌

ಹೆಲ್ಪ್‌ ಲೈನ್‌ ಆರಂಭ;

ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಹೆಲ್ಪ್‌ ಲೈನ್‌ ಆರಂಭಿಸಿದೆ. ತಮ್ಮ ಸಂಬಂಧಿಕರು ಅಥವಾ ಸ್ನೇಹಿತರು ಅಲ್ಲಿಗೆ ತೆರಳಿದ್ದರೆ ಈ ಹೆಲ್ಪ್‌ ಲೈನ್‌ ನಂಬರ್‌ ಗಳಿಗೆ ಮಾಹಿತಿ ನೀಡುವಂತೆ ಸರ್ಕಾರ ಕೋರಿದೆ.

080-43344335; 080-43344336; 080-43344342

More articles

Latest article