ದ್ವಿಚಕ್ರ ವಾಹನ ಕಳ್ಳರ ಬಂಧನ; ರೂ.35 ಲಕ್ಷ ಮೌಲ್ಯದ 25 ವಾಹನ ಜಪ್ತಿ

Most read

ಬೆಂಗಳೂರು: ಮನೆಗಳ ಎದುರು ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ವರುಣ್ ಕುಮಾ‌ರ್, ಮೊಹಮ್ಮದ್ ಬಂಧಿತ ಆರೋಪಿಗಳು. ಇವರು ಕಳವು ಮಾಡಿದ್ದ ವಾಹನಗಳನ್ನು ಖರೀದಿಸುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿ, ಆತನಿಂದ ರೂ.35 ಲಕ್ಷ ಮೌಲ್ಯದ 25 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದಯನಗರ ಗ್ರಾಮದ ನಿವಾಸಿಯೊಬ್ಬರು ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳವಾಗಿದೆ ಎಂದು ಮಾರ್ಚ್ 6ರಂದು ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರನ್ನೂ ದ್ವಿಚಕ್ರ ವಾಹನ ಸಮೇತ ಬಂಧಿಸಿದ್ದಾರೆ. ಇವರನ್ನು

ಇವರನ್ನು ವಿಚಾರಣೆ ನಡೆಸಿದಾಗ ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಹೆಚ್ಚಿನ ವಿಚಾರಣೆ ನಡೆಸಿದಾಗ ಕಳವು ಮಾಡಿದ ದ್ವಿಚಕ್ರ ವಾಹನಗಳ ಪೈಕಿ 12 ವಾಹನವನ್ನು ಹಾವೇರಿಯ ಕರ್ಜಗಿ ಗ್ರಾಮದ ನಿವಾಸಿಯೊಬ್ಬರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ನಂತರ ಆತನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕಳವು ಮಾಡಿದ ವಾಹನಗಳನ್ನು ಸಿಂಗಯ್ಯನ ಪಾಳ್ಯ ರಸ್ತೆ ಪಕ್ಕದ ಖಾಲಿ ಪ್ರದೇಶ ಹಾಗೂ ಡೀಸೆಲ್ ಶೆಡ್ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 12 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

More articles

Latest article