ಬೆಂಗಳೂರು: ಏಪ್ರಿಲ್ 21 ರಿಂದ ಏಪ್ರಿಲ್ 27ರವರೆಗೆ ನಡೆದ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ 650ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸಿದವರಿಂದ ಒಟ್ಟು 1.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ನಗರದಾದ್ಯಂತ 53 ಸಂಚಾರ ಪೊಲೀಸ್ ಠಾಣೆಗಳ ಎಲ್ಲ ಸಂಚಾರ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಾಹನ ಚಲಾಯಿಸುವವರ ವಿರುದ್ಧ ನಡೆದ ವಿಶೇಷ ಕಾರ್ಯಾಚರಣೆಯ ಸಂದರ್ಭದಲ್ಲಿ, ಒಟ್ಟು 43,253 ವಾಹನಗಳನ್ನು ಪರಿಶೀಲಿಸಲಾಗಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ 668 ಪ್ರಕರಣಗಳನ್ನು ದಾಖಲಿಸಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸಿದವರ ವಿರುದ್ಧ 185 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವರಿಂದ ಒಟ್ಟು 1.89 ಲಕ್ಷ ರೂ. ದಂಡವನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.