ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆಯ ಅಗತ್ಯ:ಸಿಎಂ ಸಿದ್ದರಾಮಯ್ಯ

Most read

ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು  ಇಲ್ಲಿನ ಎನ್ ಡಿ . ಪಿ ಯು ಕಾಲೇಜ್ ಆವರಣ, ಅಕ್ಕಿ ಆಲೂರಿನಲ್ಲಿ    ಮಾತನಾಡಿದರು.

ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು  ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ  ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಿತ್ತು.ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದು, ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ  ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ನನಗೆ  ತಿಳಿದಿಲ್ಲ. ಸಚಿವ ದಿನೇಶ್ ಗುಂಡೂರಾವ್ ಹಾಗು ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.

ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಾತಿಗಣತಿ:ಶಂಖದಿಂದ ಬಂದರೆ ಮಾತ್ರ  ತೀರ್ಥ

ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ  ಮಾಡುತ್ತಿದ್ದವರು ಕೇಂದ್ರ ಸರ್ಕಾರ  ಜಾತಿಗಣತಿ ಮಾಡಿಸುವುದನ್ನು  ಮುಕ್ತ ಮನಸ್ಸಿನಿಂದ  ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ  ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಹೇಳುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಅಲ್ಲವೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ದೇವೇಗೌಡರದ್ದು ಇಬ್ಬಗೆಯ ನೀತಿ

ಪಾಕಿಸ್ತಾನದ ವಿಚಾರದಲ್ಲಿ  ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು, ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ ಎಂದು ಹೇಳಿದರು.

More articles

Latest article