ಬಿಜೆಪಿ ಜನಾಕ್ರೋಶ ಯಾತ್ರೆಗೆ ಆಕ್ರೋಶ ಹೊರ ಹಾಕಿದ ಟೊಮೆಟೋ ಮಂಡಿ ಮಾಲೀಕರು, ಕೃಷಿಕರು

Most read

ಕೋಲಾರ: ಜನಾಕ್ರೋಶ ಯಾತ್ರೆಯನ್ನು ಯಾವ ಉದ್ದೇಶಕ್ಕಾಗಿ ಮಾಡುತ್ತಿದ್ದೀರಿ ಎಂದು ಕೋಲಾರ ಮಂಡಿ ವರ್ತಕರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೋಲಾರದಲ್ಲಿ ನಾಳೆ ಬಿಜೆಪಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಕೋಲಾರ ಮಂಡಿ ವರ್ತಕರ ಮುಖಂಡ ಕೆ ಎನ್ ಎನ್ ಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯಾರ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೀರಿ? ಬಿಸಿಲು ದಿನೇ ದಿನೇ ಹೆಚ್ಚುತ್ತಿದ್ದು ಮಳೆ ಬರುವ ಸೂಚನೆಯೇ ಇಲ್ಲವಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ರೈತರು ಆತ್ಮಹತ್ಯೆಯ ದಾರಿ ಹಿಡಿಯಬೇಕಾಗುತ್ತದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಜಿಲ್ಲೆಯ ನಾಗರಿಕರು ಮತ್ತು ಕೃಷಿಕರಾದ ಮನಗೆ ನೀರಾವರಿ ಹೋರಾಟ ನಡೆಸುವ ಅಗತ್ಯವಿದೆ. ಟೊಮೆಟೋ ಧಾರಣೆ ಕುಸಿದಿದ್ದು, ರೈತರಿಗೆ ನ್ಯಾಯ ಒದಗಿಸುವ ಹೋರಾಟ ಬೇಕಿದೆಇಂತಹ ತುರ್ತು ಅಗತ್ಯ ವಿಷಯಗಳನ್ನು ಕೈಬಿಟ್ಟು ರಾಜಕೀಯ ಸ್ವಾರ್ಥಕ್ಕಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿರುವುದು ಸರಿಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೆಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

More articles

Latest article