Tuesday, May 6, 2025

ಹೆಚ್.ಎಸ್.ಆರ್ ಲೇಔಟ್ ಪೊಲೀಸರ ಕಾರ್ಯಾಚರಣೆ: ರೂ.60 ಲಕ್ಷ ಮೌಲ್ಯದ ಗಾಂಜಾ ಜಪ್ತಿ

Most read

ಬೆಂಗಳೂರು: ನಗರದ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 62 ಕೆಜಿ ಗಾಂಜಾ, ಮೊಬೈಲ್‌ ಫೋನ್‌ ಮತ್ತು ಐಷರ್ ಗೂಡ್ಸ್ ಕ್ಯಾರಿಯರ್ ವಾಹನವನ್ನು ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ರೂ.60 ಲಕ್ಷ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯು ಹೆಚ್.ಎಸ್.ಆರ್ ಲೇ ಔಟ್‌ , 4ನೇ ಸೆಕ್ಟರ್, ಪ್ರೀಡಂ ಇಂಟರ್ ನ್ಯಾಷನಲ್ ಸ್ಕೂಲ್ ಸಮೀಪದ ರಸ್ತೆಯಲ್ಲಿ ಗಾಂಜಾವನ್ನು ಐಷರ್ ಗೂಡ್ಸ್ ಕ್ಯಾರಿಯರ್ ವಾಹನದಲ್ಲಿ ಇರಿಸಿಕೊಂಡು ಮಾರಾಟ ಮಾಡುತ್ತಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿರುತ್ತದೆ. ಈ ಮಾಹಿತಿಯನ್ನಾಧರಿಸಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಆರೋಪಿಯು ಒಡಿಸಾ ರಾಜ್ಯದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article