ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೂರ್ವಾಂಕರ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMAಯನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನಿಂದ 416 ಗ್ರಾಂ MDMA ಮತ್ತು ರೂ. 15,000 ನಗದು ಮತ್ತು , ಒಂದು ಹೋಂಡಾ ಸಿವಿಕ್ ಕಾರ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಮೌಲ್ಯ 52 ಲಕ್ಷ ರೂ. ಎಂದು ಪೊಲೀಸರು ಹೇಳಿದ್ದಾರೆ.
ಕೊತ್ತನೂರು ಪೊಲೀಸ್ ಠಾಣೆಗೆ ಡ್ರಗ್ಸ್ ಮಾರಾಟ ಕುರಿತು ಖಚಿತ ಮಾಹಿತಿ ದೊರೆತಿರುತ್ತದೆ. ಪೂರ್ವಾಂಕರ ಜೋಡಿ ರಸ್ತೆಯಲ್ಲಿ ಓರ್ವ ವಿದೇಶಿ ವ್ಯಕ್ತಿಯು ಒಂದು ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ MDMAಯನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ತಿಳಿದು ಬಂದಿರುತ್ತದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಈತನಿಂದ 416 ಗ್ರಾಂ METHAMPHETAMINE /MDMA ಮತ್ತು ರೂ. 15,000 ನಗದು, 20 ಜಿಪ್ ಲಾಕ್ ಕವರ್, ಒಂದು ತೂಕ ಮಾಡುವ ಯಂತ್ರ ಹಾಗು ಕೃತ್ಯಕ್ಕೆ ಬಳಸಿದ ಒಂದು ಹೋಂಡಾ ಸಿವಿಕ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶಿ ಮೂಲದ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ಈತ ನಿಷೇದಿತ ಮಾದಕ ವಸ್ತುವಾದ MDMA ಅನ್ನು ಮತ್ತೋರ್ವ ಅಪರಿಚಿತ ವಿದೇಶಿ ಪ್ರಜೆಯಿಂದ ಕಡಿಮೆ ಬೆಲೆಗೆ ಖರೀದಿಸಿ ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದ್ದಾಗಿ ತಿಳಿಸಿರುತ್ತಾನೆ. ಕೃತ್ಯಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ಮತ್ತು 2 ಮೊಬೈಲ್ ಫೋನ್ ಗಳನ್ನುಪೊಲೀರು ವಶಪಡಿಸಿಕೊಂಡಿದ್ದಾರೆ.