ಬೆಂಗಳೂರು: ಪಾಕಿಸ್ತಾನದ ವಿರುದ್ಧ ಬುಧವಾರ ಮುಂಜಾನೆ ಆಪರೇಷನ್ ಸಿಂಧೂರ ನಡೆದ ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಭದ್ರತಾ ಕಾರಣಕ್ಕೆ ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಏರ್ ಇಂಡಿಯಾ ವಿಮಾನದಿಂದ ಓರ್ವ ಪ್ರಯಾಣಿಕನನ್ನು ಕೆಳಗಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಈ ಪ್ರಯಾಣಿಕ ಬೆಂಗಳೂರಿನಿಂದ ನವದೆಹಲಿಗೆ AI-2820 ವಿಮಾನದಲ್ಲಿ ಪ್ರಯಾಣ ಮಾಡಲು ಹೊರಟಿದ್ದರು, ಬುಧವಾರ ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಈ ಪ್ರಯಾಣಿಕ ಗುರುತು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಅವರನ್ನು ಕೆಳಗಿಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏರ್ ಇಂಡಿಯಾ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ ನಮಗೆ ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾವು ಆದರೆ ಯಾವುದೇ ವಿವರಗಳನ್ನು ಹಂಚಿಕೊಳ್ಳುವಂತಿಲ್ಲ. ಪ್ರಯಾಣಿಕನನ್ನು ಕೆಳಗಿಳಿಸಿದ್ದೇವೆ ಎಂದರೆ ಅದಕ್ಕೊಂದು ನಿರ್ದಿಷ್ಟ ಕಾರಣವಿರುತ್ತದೆ. ಆ ಕಾರಣವನ್ನು ನಾವು ಬಹಿರಂಗಪಡಿಸುವಂತಿಲ್ಲ ಎಂದು ತಿಳಿಸಿದ್ದಾರೆ.