ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ: ಮೀನುಗಾರರಿಗೆ ಎಚ್ಚರಿಕೆ

Most read

ಮಂಗಳೂರು:ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪಾಕಿಸ್ತಾನ ನಡೆಸಿದ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಆಪರೇಷನ್‌ ಸಿಂಧೂರ ನಡೆಸಿದ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಬಂದಿಳಿಯುವ ವಿದೇಶಗಳ ಹಡುಗುಗಳಲ್ಲಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಮೀನುಗಾರಿಕಾ ದೋಣಿಗಳ ತಪಾಸಣೆಯನ್ನೂ ಮಾಡಲಾಗುತ್ತಿದೆ. 12 ನಾಟಿಕನ್ ಮೈಲಿ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದ್ದು, ಆಳ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕರಾವಳಿ ಕಾವಲು ಪಡೆ ಕಟ್ಟೆಚ್ಚರ:

ಮಂಗಳೂರಿನ ಕಡಲ ತೀರದಲ್ಲಿ ಕರಾವಳಿ ಕಾವಲು ಪಡೆಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಮಂಗಳೂರಿನ ಬಂದರು ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕೆ ನಡೆಸುವ ದೋಣಿಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಅನುಮಾನಾಸ್ಪದವಾಗಿ ಕಂಡು ಬರುವ ದೋಣಿಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article