ಮಂಗಳೂರು: ಸಾರ್ವಜನಿಕವಾಗಿ ಮಹಿಳೆಗೆ ಗುಪ್ತಾಂಗ ತೋರಿಸಿದ ಬಿಜೆಪಿ ಮುಖಂಡ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪದ್ಮನಾಭ ಸಪಲ್ಯನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ಪದ್ಮನಾಭ ಸಾರ್ವಜನಿಕ ರಸ್ತೆಗೆ ಗೇಟ್ ಅಳವಡಿಸಿಕೊಂಡಿದ್ದ. ಮಹಿಳೆಯೊಬ್ಬರು ಇದನ್ನು ಪ್ರಶ್ನಿಸಿದ್ದರು. ಆಗ ಈತ ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದ. ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್ಎಸ್ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯ ಅವರ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಿ ಪುತ್ತೂರು ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜರೆಮಾರು ಆದೇಶ ಹೊರಡಿಸಿದ್ದಾರೆ.