ಸಿಬಿಎಸ್‌ ಇ 12ನೇ ತರಗತಿ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ

Most read

ನವದೆಹಲಿ: ಸಿಬಿಎಸ್‌ ಇ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿನಿಯರು ಶೇಕಡಾ 5ರಷ್ಟು ಹೆಚ್ಚಿನ ಅಂಕ ಗಳಿಸಿ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ.

ಈ ವರ್ಷ, ಶೇಕಡಾ 88.39 ರಷ್ಟು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ, ಕಳೆದ ವರ್ಷದ ಶೇಕಡಾ 87.98 ಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ವಿದ್ಯಾರ್ಥಿನಿಯರು ಶೇಕಡಾ 91.64 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇಕಡಾ 85.70 ರಷ್ಡು ಬಾಲಕರು ತೇರ್ಗಡೆಯಾಗಿದ್ದಾರೆ.
ತೃತೀಯ ಲಿಂಗ ಅಭ್ಯರ್ಥಿಗಳು ಕಳೆದ ವರ್ಷದ ಶೇಕಡಾ 50 ಕ್ಕೆ ಹೋಲಿಸಿದರೆ ಈ ವರ್ಷ ಎಲ್ಲರೂ ಉತ್ತೀರ್ಣರಾಗಿದ್ದು, ಶೇಕಡಾ 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟು 1,11,544 ಅಭ್ಯರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದರೆ, 24,867 ಅಭ್ಯರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಈ ವರ್ಷ ಒಟ್ಟು 16,92,794 ಅಭ್ಯರ್ಥಿಗಳು 12 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.

More articles

Latest article