ಪಾಕ್ ಹೈಕಮಿಷನ್ ಅಧಿಕಾರಿ ಉಚ್ಚಾಟಿಸಿದ ಭಾರತ: ದೇಶ ತೊರೆಯಲು ಸೂಚನೆ

Most read

ನವದೆಹಲಿ: ಪಾಕಿಸ್ತಾನದ ಹೈಕಮಿಷನ್‌ ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಅವರನ್ನು ಹೊರಹಾಕಿದೆ.

ವಿದೇಶಾಂಗ ಸಚಿವಾಲಯವು ಅಧಿಕಾರಿಗೆ ಭಾರತವನ್ನು ತೊರೆಯಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದೆ. ನಾಲ್ಕು ದಿನಗಳ ಶಸ್ತ್ರಾಸ್ತ್ರ ಪಡೆಗಳ ಚಕಮಕಿಯ ನಂತರ ಉಭಯ ದೇಶಗಳ ನಡುವೆ ಹೆಚ್ಚಿದ ಉದ್ವಿಗ್ನತೆಯ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಯ ಚಟುವಟಿಕೆಗಳ ಕುರಿತು ನವದೆಹಲಿಯಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಗೆ ಭಾರತ ನೋಟಿಸ್ ನೀಡಿದೆ.

More articles

Latest article