ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಮುಟ್ಟಿಸಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಮುಟ್ಟಿಸಿದ್ದಾರೆ.

ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ, ತುಮಕೂರಿನ ನಿರ್ಮಾಣ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ಕಾನೂನು ಮಾಪನಶಾಸ್ತ್ರದ ಇನ್ಸ್‌ಪೆಕ್ಟ‌ರ್ ಎಚ್. ಆರ್. ನಟರಾಜ್, ದಕ್ಷಿಣ ಜಿಲ್ಲೆಯ ಸರ್ವೇ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲ್ಲೂಕು ಕಚೇರಿಯ ಎಸ್‌ ಡಿಎ ಅನಂತ್ ಕುಮಾರ್, ಯಾದಗಿರಿಯ ಶಹಾಪುರ ತಾಲೂಕಿನ ಉಮಾಕಾಂತ ಎನ್ನುವವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಅಧಿಕಾರಿಗಳಿಗೆ ಸೇರಿದ ಬೆಂಗಳೂರಿನ 12, ತುಮಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿಯ 5, ಮಂಗಳೂರಿನ 4 ಹಾಗೂ ವಿಜಯಪುರದ 4 ಸ್ಥಳಗಳಲ್ಲಿ ಲೋಕಾಯುಕ್ತ ಇಲಾಖೆ ದಾಳಿ ನಡೆಸಿದೆ.

More articles

Latest article

Most read