ಬೆಂಗಳೂರು: ತಡ ರಾತ್ರಿಯಲ್ಲಿ ಬಾಗಲೂರು ಮುಖ್ಯ ರಸ್ತೆಯ ಮೊಬೈಲ್ ಸರ್ವೀಸ್ ಅಂಗಡಿಯ ಬೀಗ ಮುರಿದು ಕಳವು ಮಾಡಿದ್ದ ಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 1.40 ಲಕ್ಷ ರೂ. ಮೌಲ್ಯದ 14 ಮೊಬೈಲ್ ಪೋನ್ ಹಾಗೂ ಲ್ಯಾಪ್ ಟಾಪ್ ಅನ್ನು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಸರ್ವೀಸ್ ಅಂಗಡಿ ಮಾಲೀಕ ಕಳ್ಳತನ ನಡೆದಿರುವ ಬಗ್ಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಕಟ್ಟಿಗೇನಹಳ್ಳಿಯ ಪಿ.ಜಿ. ಸ್ಟ್ರೀಟ್ ನಲ್ಲಿ ಮೊಬೈಲ್‌ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಅವರು ಮೊಬೈಲ್ ಸರ್ವೀಸ್ ಅಂಗಡಿಯಲ್ಲಿ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಆರೋಪಿಗಳ ಬಳಿಯಿದ್ದ ರೂ.1.40 ಲಕ್ಷ ಮೌಲ್ಯದ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಅನ್ನು ವಶಪಡಿಸಿಕೊಂಡಿದ್ದಾರೆ.