ರಾಮನಗರ: ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು; ಅಗರ ಕೆರೆಯಲ್ಲಿ ಟೆಕ್ಕಿ ಆತ್ಮಹತ್ಯೆ

Most read

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ. ಬೆಂಗಳೂರು ಮೂಲದ ರಾಘವಿ (18) ಮಧುಮಿತ (20), ಹಾಗೂ ರಮ್ಯಾ(22) ಮೃತ ಯುವತಿಯರು. ಜಲಾಶಯವನ್ನು ನೋಡಲೆಂದೇ ಏಳು ಯುವತಿಯರು ಆಗಮಿಸಿದ್ದರು. ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದಾಳೆ. ಆಕೆಯ ರಕ್ಷಣೆಗೆ ಆರು ಯುವತಿಯರು ನೀರಿಗೆ ಇಳಿದಿದ್ದಾರೆ.  ಇವರಲ್ಲಿ ಮೂವರು ಯುವತಿಯರು ಮೃತಪಟ್ಟಿದ್ದಾರೆ. ಳಿದ ಮೂವರನ್ನು ಯುವಕನೊಬ್ಬ ರಕ್ಷಿಸಿದ್ದಾನೆ.

ಬೆಂಗಳೂರಿನಿಂದ ಸಂಬಂಧಿಕರ ಮನೆಗೆ ಬಂದಿದ್ದ ಯುವತಿಯರು, ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು ಹೋಗಿದ್ದ ವೇಳೆ ಈ ದುರಂತ ನಡೆದಿದೆ. ಏಳು ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ.

ಐಟಿಬಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಪತೆಯಾಗಿದೆ. ನಿಖಿಲ್ ಸೋಮವಂಶಿ ಅಗರ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಶವ ಮೂರು ದಿನಗಳ ನಂತರ ಪತ್ತೆಯಾಗಿದೆ. ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಿಖಿಲ್‌ ಐಐಎಸ್‌ ಸಿ ಪದವೀಧರನಾಗಿದ್ದು ಕೋರಮಂಗಲದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೆಚ್ಎಸ್ಆರ್‌ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಲಾಗಿದೆ.

More articles

Latest article