ಬಿಜಾಪುರ: ಛತ್ತೀಸಗಢದ ನಾರಾಯಣಪುರ ಹಾಗೂ ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಬಿ ಎಸ್ ಎಫ್ ಹಾಗೂ ಜಿಲ್ಲಾ ಮೀಸಲು ಪಡೆ (ಡಿ ಆರ್ ಜಿ) ಇಂದು ಜಂಟಿ ಕಾರ್ಯಾಚರಣೆ ನಡೆಸಿದ ಎನ್ ಕೌಂಟರ್ ನಲ್ಲಿ 26 ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಭುಜ್ ಮದ್ ಮತ್ತು ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಡುವೆ ಇರುವ ದಟ್ಟ ಅರಣ್ಯದಲ್ಲಿ ಬಿಎಸ್‌ಎಫ್ ಹಾಗೂ ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ (ಡಿ ಆರ್ ಜಿ) ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್ ಕೌಂಟರ್ ನಡೆದಿದೆ ಎಂದು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ.