ಬೆಂಗಳೂರು: ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಿಸಿಕೊಳ್ಳಲಿದೆ. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ರಾಮನಗ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಲಾಗಿದೆ. ಆದರೆ ಜಿಲ್ಲಾ ಕೇಂದ್ರ ರಾಮನಗರದಲ್ಲೇ ಇರಲಿದೆ ಎಂದರು. ಈ ಬದಲಾವಣೆಯಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ತಗುಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಹೆಸರು ಬದಲಾವಣೆ ಮಾಡುವ ರಾಜ್ಯ ಸರಕಾರದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ಭೂ ದಾಖಲೆಗಳು ರಾಜ್ಯ ಪಟ್ಟಿಗೆ ಒಳಪಡುವುದರಿಂದ ಯಾವುದೇ ಅಡಚಣೆ ಉಂಟಗುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ ಸ್ಪಷ್ಟಪಡಿಸಿದರು.