ಹೆಬ್ಬಾಳ ಫ್ಲೈ ಓವರ್ ಮೇಲೆ ಭೀಕರ ಅಪಘಾತ; ಲಾರಿ ಚಾಲಕ ಸಾ*ವು; ಸಂಚಾರ ಅಸ್ತವ್ಯಸ್ತ

Most read

ಬೆಂಗಳೂರು: ಹೆಬ್ಬಾಳದ ಕೊಡಿಗೇಹಳ್ಳಿ ಮೇಲ್ಸೇತುವೆ ಮೇಲೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಆಗ ಲಾರಿ ಚಾಲಕ ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಹೀಗೆ ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುವ ಮಾರ್ಗದಲ್ಲಿ ತಡರಾತ್ರಿ ಎರಡು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. 10 ವ್ಹೀಲರ್ ಓಪನ್ ಬಾಡಿ ವಾಹನ, ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಪರಿಣಾಮ ರಸ್ತೆ ಮೇಲೆಯೇ ಕಲ್ಲು ತುಂಬಿದ್ದ ಟ್ರಕ್ ಪಲ್ಟಿ ಹೊಡೆದಿದೆ.

ಕಸದ ಲಾರಿ ಚಾಲಕ ಫಯಾಜ್ ಅಹಮ್ಮದ್ ಸಾವನಪ್ಪಿದ್ದರೆ ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಸದ ಲಾರಿಗೆ ಕಲ್ಲುಗಳನ್ನು ತುಂಬಿಕೊಂಡು ಬರುತ್ತಿದ್ದ 10 ವ್ಹೀಲರ್ ಟ್ರಕ್‌ ಕಸದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಲ್ಲು ತುಂಬಿದ್ದ ಟ್ರಕ್ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

More articles

Latest article