ಕುವೆಂಪು ವಿವಿ: ಇಂದು ನಡೆಯಬೇಕಿದ್ದ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ

Most read

ಶಂಕರಘಟ್ಟ: ಇಂದು ನಡೆಯಬೇಕಿದ್ದ ಬಿ. ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರೀಕ್ಷಾಂಗ ವಿವಿಯ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್ ಅವರು, ಪ್ರಶ್ನೆಪತ್ರಿಕೆ ಗೊಂದಲ ಕುರಿತು ಕನ್ನಡ ವಿಷಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರನ್ನು ವಿಚಾರಣೆ ನಡೆಸಿದ್ದಾರೆ. ಈ ಗೊಂದಲಕ್ಕೆ ಪ್ರಶ್ನೆಪತ್ರಿಕೆ ಸಿದ್ದಪಡಿಸಿ, ಪರಿಶೀಲನೆ ನಡೆಸಿದ ಅಧ್ಯಾಪಕರುಗಳು ಮತ್ತು ಅಧ್ಯಕ್ಷರೇ ನೇರ ಹೊಣೆಗಾರರಾಗಿರುತ್ತಾರೆ. ಈ ಕುರಿತು ಪರೀಕ್ಷಾ ಮಂಡಳಿಯ ಅಧ್ಯಕ್ಷರು ತಪ್ಪೊಪ್ಪಿಗೆಯ ಪತ್ರ ಸಲ್ಲಿಸಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಶ್ವವಿದ್ಯಾಲಯದ ಘನತೆಗೆ ಕುಂದು ತಂದಿರುವ ಮತ್ತು ವಿದ್ಯಾರ್ಥಿಗಳಿಗೆ ತೊಡಕು ಉಂಟು ಮಾಡಿರುವ ಈ ಪ್ರಕರಣಕ್ಕೆ ಸಂಬಂಧಪಟ್ಟವರ ಮೇಲೆ ಪರೀಕ್ಷಾ ಕಾಯ್ದೆಯ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದೂ ಕುಲಸಚಿವರು ಹೇಳಿದ್ದಾರೆ.

More articles

Latest article