ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ: ಈಶ್ವರ ಖಂಡ್ರೆ

ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

More articles

Latest article

Most read