ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರವಿಕುಮಾರ್ ವಿರುದ್ಧ ಕ್ರಮ: ಡಿಕೆ ಶಿವಕುಮಾರ್

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಹೇಳುವ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ವಿಧಾನಪರಿಷತ್‌ ಸದಸ್ಯ ಎನ್. ರವಿಕುಮಾರ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು ಇಂದು ಮಧ್ಯಾಹ್ನದವರೆಗೆ ಅರ್ಧ ಡಜನ್‌ಗೂ ಹೆಚ್ಚು ಐಎಎಸ್ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿದ್ದಾರೆ. ಅವರೆಲ್ಲರೂ ತುಂಬಾ ಉದ್ರಿಕ್ತ ಮನಸ್ಥಿತಿಯಲ್ಲಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಬಿಜೆಪಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು ಮತ್ತು ಕೇಂದ್ರ ಸಚಿವರು ಇದಕ್ಕೆ ಪ್ರತಿಕ್ರಿಯಿಸಬೇಕೆಂದು ನಾನು ಬಯಸುತ್ತೇನೆ ಎಂದೂ ಡಿಸಿಎಂ ಹೇಳಿದರು.

ಮೇ 24 ರಂದು ಬಿಜೆಪಿಯ ‘ಕಲಬುರಗಿ ಚಲೋ’ ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲ ಎಂದು ರವಿಕುಮಾರ್ ಹೇಳಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ‘ಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆ’ ಎಂದು ಅನ್ನಿಸುತ್ತದೆ ಎಂದು ಹೇಳಿದ್ದರು.

More articles

Latest article

Most read