ರಾಹುಲ್ ಗಾಂಧಿಗೆ ಅಧಿಕಾರ ಸಿಕ್ಕ ದಿನವೇ ಪಾಕ್‌ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಲಿದೆ: ಕಾಂಗ್ರೆಸ್

ನವದೆಹಲಿ: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಅಧಿಕಾರ ದೊರೆತ ದಿನವೇ ಪಾಕ್‌ ಆಕ್ರಮಿತ ಕಾಶ್ಮೀರವು ಭಾರತಕ್ಕೆ ಸೇರ್ಪಡೆಯಾಗಲಿದೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್‌ ತಿವಾರಿ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು  ‘ರಾಹುಲ್ ಗಾಂಧಿ ಅವರ ಕೈಗೆ ಅಧಿಕಾರ ಹಾಗೂ ಭಾರತಕ್ಕಾಗಿ ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ದೊರೆತ ದಿನವೇ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ. ಅವರು ದೃಢ ನಿಶ್ಚಯ ಹೊಂದಿರುವ ವ್ಯಕ್ತಿಯಾಗಿರುವುದರಿಂದ ನನ್ನಲ್ಲಿ ಆ ನಂಬಿಕೆ ಇದೆ’ ಎಂದು ಪ್ರತಿಪಾದಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ ನಲ್ಲಿ ಉಗ್ರರು ಏಪ್ರಿಲ್‌ 22ರಂದು ನಡೆಸಿದ ಗುಂಡಿನ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಉಗ್ರರ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದನಾ ನೆಲೆಗಳ ಮೇಲೆ ಮೇ 7ರಂದು ‘ಆಪರೇಷನ್‌ ಸಿಂಧೂರ’ ನಡೆಸಿತ್ತು.

ಇದರಿಂದಾಗಿ ಉಭಯ ದೇಶಗಳ ನಡುವೆ  ಸಂಘರ್ಷ ತೀವ್ರಗೊಂಡಿತ್ತು. ಆದರೆ, ಎರಡೂ ದೇಶಗಳು ಸದ್ಯ ಕದನ ವಿರಾಮ ಒಪ್ಪಂದ ಮಾಡಿಕೊಂಡಿರುವುದರಿಂದ ಪರಿಸ್ಥಿತಿ ಹತೋಟಿಯಲ್ಲಿದೆ. ಮತ್ತೊಂದು ಕಡೆ  ‘ಪಾಕ್‌ಗೆ ತಕ್ಕ ಪಾಠ ಕಲಿಸಬೇಕು. ಪಿಒಕೆ ಅನ್ನು ಹಿಂಪಡೆಯಬೇಕು’ ಎಂಬ ಕೂಗು ದೇಶಾದ್ಯಂತ ವ್ಯಾಪಕವಾಗಿ ಕೇಳಿ ಬರುತ್ತಿದೆ ಜೋರಾಗಿದೆ. ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಅಡಳಿತ ಮತ್ತು ಪ್ರತಿಪಕ್ಷಗಳು  ರಾಜಕೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ.

More articles

Latest article

Most read