ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಅಸು ನೀಗಿದ್ದಾರೆ.

ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63) ಹಾಗೂ ಮೈಸೂರಿನ ಸುರೇಶ್ (60) ಹಾಗೂ ಮದನ್ (61) ಎಂದು ಗುರುತಿಸಲಾಗಿದೆ. ಇವರು ಮೈಸೂರು ಹಾಗೂ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಮೃತ ಸುರೇಶ್ ಕಾರು ಚಾಲನೆ ಮಾಡುತ್ತಿದ್ದರು. ಇವರು ಇಂದು ಬೆಳಗ್ಗೆ 8.30 ಗಂಟೆ ಸುಮಾರಿನಲ್ಲಿ ಮುಂಡರಗಿಯಿಂದ ಬೆಂಗಳೂರಿಗೆ ಹೋಗುತ್ತಿದ್ದರು.

ತಮ್ಮ ತೋಟ ನೋಡಿಕೊಂಡು ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆಯ ಗದಗ-ಹುಬ್ಬಳ್ಳಿ ರಸ್ತೆ, ರಾಷ್ಟ್ರೀಯ ಹೆದ್ದಾರಿ 63ರ ಭದ್ರಾಪುರ ಸಮೀಪ ಕಾರು ಹೋಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಣ್ಣಿಗೇರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More articles

Latest article

Most read