ಕೋಮು ಭಾಷಣ:  ಕಲ್ಲಡ್ಕ ಪ್ರಭಾಕರ ಭಟ್ಟ ವಿರುದ್ಧ ಎಫ್.ಐ.ಆರ್

Most read

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತೆ ಹಾಗೂ ಮತೀಯ ಗುಂಪುಗಳ ನಡುವೆ ಕಲಹ ಉಂಟು ಮಾಡುವ ರೀತಿಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದ ಮೇಲೆ ಸಂಘ ಪರಿವಾರದ (ಆ‌ರ್.ಎಸ್.ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ಮದ್ದ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮೇ 12 ರಂದು ನಡೆದ  ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸುಮಾರು 500 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಈ ಸಮಾರಂಭದಲ್ಲಿ ಅವರು ಮಾತನಾಡಿದ್ದರು.

ಭಾಷಣ ಮಾಡುತ್ತಾ ಕಲ್ಲಡ್ಕ ಪ್ರಭಾಕರ್ ಭಟ್ .ಸಮಾಜದ ಸ್ವಾಸ್ತ್ರ ಕದಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಹಾನಿಯುಂಟಾಗುವ ಸಂಭವವಿರುವುದರಿಂದ ವರ ವಿರುದ್ಧ ಬಿಎನ್‌ ಎಸ್‌ ಸೆಕ್ಷನ್‌ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article