ಆರ್‌ ಸಿಬಿ ದುರಂತ:ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ; ಜಿಲ್ಲಾಧಿಕಾರಿಯಿಂದ ತನಿಖೆ:ಸಿಎಂ ಆದೇಶ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ದುರಂತ ಪ್ರಕರಣ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಿಸುತ್ತೇವೆ ಎಂದೂ ಅವರು ತಿಳಿಸಿದ್ದಾರೆ.

ಈ ದುರಂತದ ನಂತರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರಂತಕ್ಕೆ ವಿಷಾದ ವ್ಯಕ್ತಪಡಿಸಿದರು. ವಿಜಯೋತ್ಸವ ಆಚರಣೆ ವೇಳೆ ಬಹಳ ದೊಡ್ಡ ದುರಂತ ಸಂಭವಿಸಿದೆ.  ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ. ಅವರು ದಾಖಲಾಗಿದ್ದ ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಣೆ ಮಾಡಿದ್ದೇನೆ ಎಂದರು. ಗಾಯಾಳುಗಳ ಆರೋಗ್ಯ ಸ್ಥಿತಿ ಗಂಭೀರವಾಗಿಲ್ಲ.  ಎಲ್ಲಾ ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದೂ ತಿಳಿಸಿದರು.

ನಮ್ಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರು. ವಿಧಾನಸೌಧದ ಬಳಿ 1 ಲಕ್ಷಕ್ಕೂ ಅಧಿಕ ಜನ ಸೇರಿದ್ದರು. ವಿಧಾನಸೌಧ ಸಮಾರಂಭದಲ್ಲಿ ಯಾವ ದುರಂತ ನಡೆದಿಲ್ಲ ಎಂದರು.

ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದ ಅವರು 15 ದಿನಗಳಲ್ಲಿ ತನಿಖೆ ನಡೆಸಿ ವರದಿಗೆ ಸೂಚನೆ ನೀಡಲಾಗಿದೆ. ದುರಂತವನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಜಿಲ್ಲಾಧಿಕಾರಿಯಿಂದ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

More articles

Latest article

Most read