Saturday, June 7, 2025

ಬೆಂಗಳೂರು ನೂತನ ಪೊಲೀಸ್‌ ಅಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Most read

ಬೆಂಗಳೂರು: ನಗರದ ಪೊಲೀಸ್‌ ಆಯುಕ್ತರಾಗಿ ಬೆಂಗಳೂರಿನ 39ನೇ ಪೊಲೀಸ್ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಅವರು ತಡರಾತ್ರಿ 12.15ಕ್ಕೆ ಕಡತಕ್ಕೆ ಸಹಿ ಹಾಕುವ ಮೂಲಕ ಅಧಿಕಾರ ಸ್ವೀಕರಿಸಿದರು. ಅಗಲೇ ಅವರು ಹಿರಿಯ ಅಧಿಕಾರಿಗಳು, ಡಿಸಿಪಿಗಳ ಜತೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಆದೇಶದ ಅನ್ವಯ ಅಧಿಕಾರ ಸ್ವೀಕರಿಸಿದ್ದೇನೆ. ಕಠಿಣ ಪರಿಸ್ಥಿತಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದೇನೆ.  ನಾನು ಹಿಂದೆ ಇದೇ ಕಚೇರಿಯಲ್ಲಿ ಕೆಲಸ ಮಾಡಿದ್ದೆ. ಈಗ ಸಮಯ ಬೇರೆಯ ರೀತಿ ಇದೆ. ಕಾಲ್ತುಳಿತ ಪ್ರಕರಣ ಕುರಿತು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಅಧಿಕಾರಿಗಳೊಂದಿಗೆ ಸಭೆ ಮಾಡಿ ಅನಂತರ ಪ್ರತಿಕ್ರಿಯಿಸುತ್ತೇನೆ ಎಂದು ನೂತನ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಹಿಂದಿನ ಕಮಿಷನರ್ ಉತ್ತಮ ಕೆಲಸ ಮಾಡಿದ್ದು ಅದೇ ಹಾದಿಯಲ್ಲಿ ಸಾಗುವುದಾಗಿಯೂ ತಿಳಿಸಿದ್ದಾರೆ.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಎಡಿಜಿಬಿ ಹುದ್ದೆ ಅಧಿಕಾರಿ ಅಮಾನತು:

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತ, ಕ್ರಿಕೆಟ್ ಕ್ರೀಡಾಂಗಣದ ಉಸ್ತುವಾರಿ, ಕೇಂದ್ರ ವಿಭಾಗದ ಡಿಸಿಪಿ, ಎಸಿಪಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪ್ರಕಟಿಸಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಅಧಿಕಾರಿಯೊಬ್ಬರ ಅಮಾನತು ಆಗಿದ್ದು, ಬಿ ದಯಾನಂದ್ ಅವರ ಮುಂಬಡ್ತಿಗೂ ಇದರಿಂದ ತೊಂದರೆಯಾಗಿದೆ.

More articles

Latest article