ಛತ್ತೀಸ್ ಗಢದಲ್ಲಿ ಮುಂದುವರೆದ ಕಾರ್ಯಾಚರಣೆ: ಮೂರು ದಿನಗಳಲ್ಲಿ ಏಳು ನಕ್ಸಲರ ಹತ್ಯೆ

ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಐವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ಪ್ರಮುಖ ನಕ್ಸಲ್ ನಾಯಕರಾದ ಸುಧಾಕರ್ ಮತ್ತು ಭಾಸ್ಕರ್ ಸೇರಿದಂತೆ ಏಳು ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಈ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆದಿದೆ. ಎಲ್ಲ ಏಳು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಉದ್ಯಾನದಲ್ಲಿ ಪ್ರಮುಖ ನಕ್ಸಲ್ ನಾಯಕರೊಬ್ಬರು ಅಡಗಿರುವ ಮಾಹಿತಿ ಪಡೆದುಕೊಂಡ ನಂತರ ಜಿಲ್ಲಾ ಮೀಸಲು ಪಡೆ (ಕೋಬ್ರಾ) (ಕಮಾಂಡೋ ಬೆಟಾಲಿಯನ್ )ಮತ್ತು ವಿಶೇಷ ಕಾರ್ಯಪಡೆ (ಎಸ್‌ ಟಿಎಫ್) ಒಳಗೊಂಡ ಜಂಟಿ ತಂಡ ಗುರುವಾರದಿಂದ ಕಾರ್ಯಾಚರಣೆ ನಡೆಸುತ್ತಿದೆ.

More articles

Latest article

Most read