ನ್ಯಾಯಾಲಯಕ್ಕೆ ಶರಣಾಗುವೆ: ಶಾಸಕ ವಿನಯ ಕುಲಕರ್ಣಿ

ಬೆಳಗಾವಿ: ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗುವುದಾಗಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನನ್ನ ವಿರುದ್ಧ ಸಂಚು ರೂಪಿಸಲಾಗಿದೆ. ನಾನೀಗ ಅಸಹಾಯಕ ಸ್ಥಿತಿಯಲ್ಲಿದ್ದೇನೆ. ತಡವಾದರೂ ಸತ್ಯಕ್ಕೆ ಜಯ ಸಿಗುವ ನಂಬಿಕೆ ಇದೆ. ಬಸವಣ್ಣನ ಕಾಲದಲ್ಲೂ ಕೊಂಡಿ ಮಂಚಣ್ಣಗಳು ಇದ್ದರು. ಈಗಲೂ ಇದ್ದಾರೆ ಎಂದೂ ಮಾರ್ಮಿಕವಾಗಿ ನುಡಿದರು.

ಕ್ಷೇತ್ರದಲ್ಲಿ ನಾನು ಇಲ್ಲದಿದ್ದರೂ ಪತ್ನಿ ಮತ್ತು ಪುತ್ರಿ ಪಕ್ಷದ ಮುಖಂಡರು ಸಾರ್ವಜನಿಕರ ಕಷ್ಟ ಸುಖಕ್ಕೆ ಸ್ಪಂದಿಸುತ್ತಾರೆ. ಅಧಿಕಾರಿಗಳ ಸಭೆ ನಡೆಸಿದ್ದೇನೆ. ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಜೂನ್ 6ರಂದು ರದ್ದುಪಡಿಸಿತ್ತು. ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಆದೇಶ ನೀಡಿತ್ತು.

More articles

Latest article

Most read