ವಿಮಾನ ಅಪಘಾತ: ಪ್ರಧಾನಿ ಮೋದಿ, ಸಚಿವರಾದ ಅಮಿತ್ ಶಾ, ನಾಯ್ಡು ರಾಜೀನಾಮೆಗೆ ಸುಬ್ರಮಣಿಯನ್‌ ಸ್ವಾಮಿ ಆಗ್ರಹ

ನವದೆಹಲಿ: ಗುಜರಾತ್ ನ ಅಹಮದಾಬಾದ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, 1950ರಲ್ಲಿ ರೈಲು ಹಳಿತಪ್ಪಿ ದುರಂತ ಸಂಭವಿಸಿತ್ತು. ಅಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಅದೇ ನೈತಿಕತೆಯ ಆಧಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಾಗರಿಕ ವಿಮಾನಯಾನ ಸಚಿವ ನಾಯ್ಡು ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅನೇಕ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಸೇರಿದಂತೆ ಅನೇಕ ಗಣ್ಯರು ವಿಮಾನ ಅಪಘಾತಕ್ಕೆಆಘಾತ ವ್ಯಕ್ತಪಡಿಸಿದ್ದಾರೆ.

ಲಂಡನ್‌ ಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನವು ಗುಜರಾತ್‌ ನ ಅಹಮದಾಬಾದ್‌ನಲ್ಲಿ ಪತನಗೊಂಡಿದ್ದಕ್ಕೆ ದೇಶಾದ್ಯಂತ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ.

ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಕ್ಷಣವಾಗಿದೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

More articles

Latest article

Most read