ವಿದೇಶಿ ಮಹಿಳೆ ಬಂಧನ; 10 ಕೋಟಿ ರೂ. ಮೌಲ್ಯದ ಡ್ರಗ್ಸ್‌  ಜಪ್ತಿ

Most read

ಬೆಂಗಳೂರು: ಸುಮಾರು 5.325 ಕೆಜಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಮಹಿಳೆ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಅಡಿಯಲ್ಲಿ ಭಾರತಕ್ಕೆ ಬಂದಿದ್ದಳು. ಆರಂಭದಲ್ಲಿ ನವದೆಹಲಿಯಲ್ಲಿ ವಾಸವಾಗಿದ್ದಳು. ನಂತರ ತೆಲಂಗಾಣ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುವುದಾಗಿ ಶೈಕ್ಷಣಿಕ  ವೀಸಾ ಪಡೆದಿದ್ದಳು. ಆದರೆ ನಂತರ ಕಾಲೇಜಿಗೆ ದಾಖಲಾಗದೆ ಡ್ರಗ್ಸ್ ಮಾರಾಟಕ್ಕೆ ಇಳಿದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಈಕೆ ದೆಹಲಿಯಿಂದ ಬೆಂಗಳೂರಿಗೆ ಬಸ್ ಮೂಲಕ ಮಾದಕವಸ್ತುಗಳನ್ನು ಸಾಗಣೆ ಮಾಡುತ್ತಿದ್ದಳು. ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ಮಾದಕವಸ್ತು ವ್ಯಾಪಾರ ಮಾಡುವಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾಳೆ. ಬಂಧಿತಳಿಂದ 5 ಕೆಜಿ 325ಗ್ರಾಂ ಎಂಡಿಎಂಎ ಹಾಗೂ ಆ್ಯಪಲ್ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ.

ಮಹಿಳೆಯರ ಉಡುಪುಗಳ ಮಧ್ಯದಲ್ಲಿ ಡ್ರಗ್ಸ್‌ ಅಡಗಿಸಿಚೂಡಿದಾರ್ ಡ್ರೆಸ್ ಪೀಸ್‍ಗಳ ಮಧ್ಯೆ ಮಾದಕವಸ್ತು ಅಡಗಿಸಿಕೊಂಡು ದೆಹಲಿಯಿಂದ ಬೆಂಗಳೂರಿಗೆ ತರುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More articles

Latest article