ಉತ್ತರಪ್ರದೇಶ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ 14 ವರ್ಷದ ಬಾಲಕ; ಎಫ್‌ ಐಆರ್ ದಾಖಲು

ಹಾಥರಸ್‌: ಉತ್ತರ ಪ್ರದೇಶದ ಮುರ್ಸಾನ್ ಎಂಬ ಗ್ರಾಮದಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ 14 ವರ್ಷದ ಬಾಲಕನ ವಿರುದ್ಧ ದೂರು ದಾಖಲಸಿಕೊಂಡು ಎಫ್‌ ಐ ಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ ಸಂಜೆ ಸಮಯದಲ್ಲಿ ತೋಟದ ಕೊಳವೆಬಾವಿ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಪಕ್ಕದ ಊರಿನ ಬಾಲಕ ತನ್ನ ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮಗಳು ಕಾಣಿಸುತ್ತಿಲ್ಲ ಎಂದು ಆತಂಕಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ ಹೊಲದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಮಗಳು ಪತ್ತೆಯಾಗಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ. ಗಾಯಗೊಂಡಿರುವುದಕ್ಕೆ ಕಾರಣ ಕೇಳಿದಾಗ ಬಾಲಕಿ ನಡೆದ ದುರಂತವನ್ನು ವಿವರಿಸಿದ್ದಾಳೆ.

ನಂತರ ಪೊಲೀಸ್‌ ಠಾಣೆಗೆ ತೆರಳಿದ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿ ಬಾಲಕನನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

More articles

Latest article

Most read